ಕಲ್ಲು ಎತ್ತಿ ಹಾಕಿ ಶಿಕ್ಷಕನ ಭೀಕರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ (ದ.ಕ), ಮೇ 28- ದುಷ್ಕರ್ಮಿಗಳು ಶಿಕ್ಷಕರ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯ್ ಜೈನ್ (40) ಕೊಲೆಯಾದ ಶಿಕ್ಷಕ ಎಂದು ಗುರುತಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಂಡೂರು ಸಮೀಪದ ಕೋಟೆಕಟ್ಟೆ ಬಳಿ ಶಿಕ್ಷಕ ವಿಜಯ್‍ಜೈನ್ ಅವರ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇಂದು ಮುಂಜಾನೆ ಈ ವಿಷಯ ಬೆಳಕಿಗೆ ಬಂದಿದ್ದು, ದಾರಿಹೋಕರು ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments