ಕಲ್ಲು ಎತ್ತಿ ಹಾಕಿ ಸೆಕ್ಯೂರಿಟಿ ಗಾರ್ಡ್ ಮರ್ಡರ್

ಈ ಸುದ್ದಿಯನ್ನು ಶೇರ್ ಮಾಡಿ

Murder--01

ಬೆಂಗಳೂರು, ಆ.8- ಸೆಕ್ಯೂರಿಟಿ ಗಾರ್ಡ್ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಆರ್‍ಆರ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಮೂಲತಃ ಕನಕಪುರ ತಾಲೂಕಿನ ನಿವಾಸಿಯಾದ ಕಾಂತರಾಜು (55) ಕೊಲೆಯಾದ ದುರ್ದೈವಿ. ಬಂಗಾರಪ್ಪ ನಗರದಲ್ಲಿ ವಾಸವಾಗಿದ್ದ ಕಾಂತರಾಜು, ಈ ಹಿಂದೆ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಮೂರು ತಿಂಗಳಿನಿಂದ ಸೆಕ್ಯೂರಿಟಿ ಗಾರ್ಡ್ ಕೆಲಸಕ್ಕೆ ಹೋಗುತ್ತಿರಲಿಲ್ಲ.

ರಾತ್ರಿ ಬಂಗಾರಪ್ಪ ಗುಡ್ಡೆಯಲ್ಲಿ ಕಾಂತರಾಜು ತಲೆ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ವಿಷಯ ತಿಳಿದ ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Facebook Comments

Sri Raghav

Admin