ಕಳೆದೆರಡು ವಾರಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

Chitradurga--01

ಚಿತ್ರದುರ್ಗ,ಏ.8– ಕಳೆದ ಎರಡು ವಾರಗಳಿಂದ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಆಲಗೊಂಡನಹಳ್ಳಿಯ ಸುತ್ತಮುತ್ತಲ ಗ್ರಾಮಗಳ ಜನತೆಯ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಇಂದು ಮುಂಜಾನೆ ಬೋನಿಗೆ ಬಿದ್ದಿದೆ.   ಕಳೆದ 15 ದಿನಗಳಿಂದ ಈ ಚಿರತೆ ಹಲವು ಕುರಿ, ನಾಯಿಗಳನ್ನು ಬಲಿ ತೆಗೆದುಕೊಂಡಿತ್ತು. ಇದರಿಂದ ಜನರು ಭಯದಲ್ಲಿ ಓಡಾಡುವಂತಹ ಪರಿಸ್ಥಿತಿ ಏರ್ಪಟ್ಟಿತ್ತು.   ಚಿರತೆ ಹಿಂಡಿಯುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರ ಹಿನ್ನೆಲೆಯಲ್ಲಿ ಕಳೆದ 10 ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಆಲಗೊಂಡನಹಳ್ಳಿ ಸಮೀಪ ಕರೆಕಲ್ ಹೊರವಲಯದಲ್ಲಿ ಬೋನ್ ಇಟ್ಟಿದ್ದರೂ ಕೂಡ ಚಿರತೆ ಬೋನಿಗೆ ಬೀಳದೆ ತಪ್ಪಿಸಿಕೊಂಡು ಓಡಾಡುತ್ತಿತ್ತು. ಕೊನೆಗೂ ಇಂದು ಮುಂಜಾನೆ 4 ಗಂಟೆ ಸಮಯದಲ್ಲಿ ಚಿರತೆ ಬೋನಿಗೆ ಬಿದ್ದಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲು ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದರಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಂತಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin