ಕಸಾಯಿ ಖಾನೆಗೆ ಸಾಗಿಸುತ್ತಿದ್ದ 16 ಎಮ್ಮೆಗಳ ರಕ್ಷಣೆ

ಈ ಸುದ್ದಿಯನ್ನು ಶೇರ್ ಮಾಡಿ

ಚನ್ನಪಟ್ಟಣ, ಅ.19- ಕಸಾಯಿ ಖಾನೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ಮಾಡಿದ ನಗರ ಪೊಲೀಸರು 16 ಎಮ್ಮೆಗಳನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿರುವ ಘಟನೆ ನಗರ ಪೊಲೀಸ್ ಠಾಣೆಯ ಮುಂಭಾಗ ನಡೆದಿದೆ.ಬೆಂಗಳೂರಿನ ಕೆಂಗೇರಿಗೆ ವಾಹನದಲ್ಲಿ ಎಮ್ಮೆಗಳನ್ನು ಸಾಗಿಸುತ್ತಿರುವ  ಬಗ್ಗೆ ಖಚಿತ ಮಾಹಿತಿ ಪಡೆದ ನಗರ ಪೊಲೀಸ್ ಠಾಣೆಯ ಪಿಎಸ್‍ಐ ಪ್ರಕಾಶ್ ಹಾಗೂ ಸಿಬ್ಬಂದಿ ದಾಳಿ ಮಾಡಿದ್ದಾರೆ.ಈ ಸಂದರ್ಭದಲ್ಲಿ ಆರೋಪಿಗಳಾದ ಮಧುಕುಮಾರ್, ನಂದೀಶ್ ಎಂಬುವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿರುವ ಪೊಲೀಸರು ವಶಪಡಿಸಿಕೊಂಡ 16 ಜಾನುವಾರುಗಳನ್ನು ಮೈಸೂರಿನ ಪಿಂಜರ್ಲ್ಪೊಸೊಸೈಟಿಯ ಗೋಶಾಲೆಗೆ ಕಳುಹಿಸಲಾಗಿದೆ.ಈ ಪ್ರಕರಣದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.

 

 

► Follow us on –  Facebook / Twitter  / Google+

Facebook Comments

Sri Raghav

Admin