ಕಾಂಗ್ರೆಸ್‍ಗೆ ಸಂಜೀವಿನಿಯಾದ ಪಂಜಾಬ್

ಈ ಸುದ್ದಿಯನ್ನು ಶೇರ್ ಮಾಡಿ

Punjab-a01

ಚಂಡೀಘಡ ,ಮಾ.11-2014ರ ಲೋಕಸಭೆ ಚುನಾವಣೆ ನಂತರ ಸಾಲು ಸಾಲು ಸೋಲಿನ ಸುಳಿಗೆ ಸಿಲುಕಿದ್ದ ಕಾಂಗ್ರೆಸ್ ಪಕ್ಷಕ್ಕೆ ಪಂಜಾಬ್ ಸಂಜೀವಿನಿಯಾಗಿ ಪರಿಣಮಿಸಿದೆ. ಎಲ್ಲರ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿ ಕಾಂಗ್ರೆಸ್ ಪಂಜಾಬ್‍ನಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರದ ಗದ್ದುಗೆ ಹಿಡಿದಿದೆ. ಈ ಮೂಲಕ ತಾನೇ ಆಡಳಿತದಲ್ಲಿದ್ದ ಉತ್ತರಾಖಂಡ್ ಕಳೆದುಕೊಂಡರೂ ಮೋದಿ ಕಣಜದಲ್ಲಿ ಗೆಲುವಿನ ಪತಾಕೆ ಹಾರಿಸಿದೆ.   ರಾಜ್ಯದ ಒಟ್ಟು 117 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 65 ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಸ್ಪಷ್ಟ ಬಹುಮತ ಗಳಿಸಿ ಅಧಿಕಾರಕ್ಕೆ ಬಂದಿದೆ. ಆಡಳಿತಾರೂಢ ಶಿರೋಮಣಿ ಅಕಾಲಿದಳ-ಬಿಜೆಪಿ ಮೈತ್ರಿಕೂಟಕ್ಕೆ ಭಾರೀ ಮುಖಭಂಗವಾಗಿದೆ. ದೆಹಲಿಯಲ್ಲಿ ಮಾಡಿದ ಜಾದೂವಿನಂತೆ ಪಂಜಾಬ್‍ನಲ್ಲೂ ಎಎಪಿ ಅಧಿಕಾರ ಹಿಡಿಯಲಿದೆ ಎಂಬ ಚುನಾವಣೆ ಸಮೀಕ್ಷೆಗಳು ಮತ್ತು ರಾಜಕೀಯ ವಿಶ್ಲೇಷಕರ ಅಭಿಪ್ರಾಯ ಕೈಕೊಟ್ಟಿದೆ. [ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ( Live Updates)  ]

ಎಎಪಿ ಇಲ್ಲಿ 22 ಕ್ಷೇತ್ರಗಳನ್ನು ಗೆದ್ದಿದ್ದರೆ ಎರಡು ಬಾರಿ ಅಧಿಕಾರ ನಡೆಸಿದ್ದ ಎಸ್‍ಎಡಿ-ಬಿಜೆಪಿ ಮೈತ್ರಿಕೂಟ 30 ಕ್ಷೇತ್ರಗಳನ್ನು ಪಡೆದಿದೆ. ಮುಖ್ಯಮಂತ್ರಿ ಬಾದಲ್ ಸಿಂಗ್ ಅವರ ಭ್ರಷ್ಟಾಚಾರ, ಡ್ರಗ್ ಮಾಫಿಯಾ ನಿರುದ್ಯೋಗ ಸೇರಿದಂತೆ ಹಲವು ಪ್ರಚಲಿತ ಸಮಸ್ಯೆಗಳು ಆಡಳಿತಾ ಪಕ್ಷಕ್ಕೆ ದುಬಾರಿಯಾಗಿ ಪರಿಣಮಿಸಿದೆ.   ಚುನಾವಣೆಗೂ ಮುನ್ನವೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಘೋಷಿಸಿದ ಪರಿಣಾಮ ಕ್ಯಾಪ್ಟನ್ ಅಮರೇಂದ್ರ ಸಿಂಗ್ ಅವರ ವರ್ಚಸ್ಸು ಪಕ್ಷಕ್ಕೆ ವರವಾಗಿ ಪರಿಣಮಿಸಿದೆ. ಇದೇ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿದ್ದು ವರ್ಚಸ್ಸು ಕೂಡ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ. ಪ್ರಮುಖವಾಗಿ ಮಾಲ್ಡವ ಪ್ರದೇಶದಲ್ಲಿ ಮತದಾರ ಕಾಂಗ್ರೆಸ್ ಕೈ ಹಿಡಿದಿದ್ದಾನೆ.

ಎರಡು ಅವಧಿಗೆ ಅಧಿಕಾರ ನಡೆಸಿದ ಎಸ್‍ಎಡಿ-ಬಿಜೆಪಿ ಮೈತ್ರಿಕೂಟದಲ್ಲಿ ನಡೆದ ಭ್ರಷ್ಟಾಚಾರ, ಡ್ರಗ್ ಮಾಫಿಯಾದಿಂದ ಬೇಸತ್ತ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಇನ್ನು ಭಾರೀ ನಿರೀಕ್ಷೆ ಮೂಡಿಸಿದ್ದ ಎಎಪಿ ಮತದಾರನ ಜಾದೂ ಮಾಡುವಲ್ಲಿ ವಿಫಲವಾಗಿದೆ. ಅಧಿಕಾರ ಹಿಡಿಯುತ್ತೇವೆ ಎಂಬ ಅತಿಯಾದ ಆತ್ಮವಿಶ್ವಾಸವೇ ಅದಕ್ಕೆ ಮುಳುವಾಗಿ ಪರಿಣಮಿಸಿದೆ. ಎಎಪಿ ಆರ್ಭಟ ದೆಹಲಿಗೆ ಸೀಮಿತ ಎಂಬುದು ಮತ್ತೊಮ್ಮೆ ರುಜುವಾತಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin