ಕಾಂಗ್ರೆಸ್ ಕಚೇರಿಯಾಗಿ ತಾಪಂ ಮಾರ್ಪಡು : ಆರೋಪ

ಈ ಸುದ್ದಿಯನ್ನು ಶೇರ್ ಮಾಡಿ

congrees

ತಿ.ನರಸೀಪುರ, ನ.29- ಪಟ್ಟಣದ ತಾಲ್ಲೂಕು ಪಂಚಾಯಿತಿಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಟಿ.ಎಚ್.ಮಂಜುನಾಥ್‍ರವರು ಕಾಂಗ್ರೆಸ್ ಕಚೇರಿಯನ್ನಾಗಿ ಮಾರ್ಪಡಿಸಿಕೊಂಡಿದ್ದಾರೆಂದು ಬಿಜೆಪಿ ಆರೋಪಿಸಿದೆ.ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ವೆಂಕಟರಮಣಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಮಿಥುನ್, ಎಸ್ಸಿ ಮೋರ್ಚಾ ತಾಲ್ಲೂಕು ಅಧ್ಯಕ್ಷ ಬಸವರಾಜು ಈ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.ಕಾಂಗ್ರೆಸ್ ಕಾರ್ಯಕರ್ತರಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎಚ್.ಮಂಜುನಾಥ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸಿ.ಚಾಮೇಗೌಡ, ಡಾ.ಎಚ್.ಸಿ.ಮಹದೇವಪ್ಪರವರ ತಾಲ್ಲೂಕು ಸಹಾಯಕ ಬಸವರಾಜು ಸರ್ಕಾರಿ ಕಚೇರಿಯಾದ ತಾಲ್ಲೂಕು ಪಂಚಾಯಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಒಟ್ಟುಗೂಡಿಸಿಕೊಂಡು ಘೋಷಣೆಗಳನ್ನು ಕೂಗುತ್ತ ಹೊರಟಿದ್ದು, ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಅವಮಾನ ಮಾಡಿದಂತಾಗಿದೆ ಎಂದು ದೂರಿದ್ದಾರೆ.ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದೇ ಎಂಬ ಕಾರಣಕ್ಕೆ ಇವರು ಸರ್ಕಾರಿ ಕಚೇರಿಯನ್ನು ಪಕ್ಷದ ಕಾರ್ಯಕ್ರಮ ರೂಪಿಸಿಕೊಳ್ಳಲು ಬಳಸಿಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿರುತ್ತಾರೆ.
ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮಹಿಸಬೇಕು. ಇದೇ ಪ್ರವೃತ್ತಿಯನ್ನು ಮುಂದಿನ ದಿನಗಳಲ್ಲಿ ಮುಂದುವರೆಸಿದರೆ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಸಿದ್ದಾರೆ.

 

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin