ಕಾಂಗ್ರೆಸ್ ಗೆ ಎಸ್.ಎಂ.ಕೃಷ್ಣ ಗುಡ್ ಬೈ

ಈ ಸುದ್ದಿಯನ್ನು ಶೇರ್ ಮಾಡಿ

S.M.Krishna-01

ಬೆಂಗಳೂರು, ಜ.28 : ಕಾಂಗ್ರೆಸ್ ನಲ್ಲಿನ ಬೆಳವಣಿಗೆಗಳ ಬಗ್ಗೆ ಬೇಸರಗೊಂಡಿರುವ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಹಾಗೂ ಪ್ರಭಾವಿ ಧುರೀಣ ಎಸ್. ಎಂ. ಕೃಷ್ಣ ಕಾಂಗ್ರೆಸ್ ನ ಸಕ್ರೀಯ ಸದಸ್ಯತ್ವಕ್ಕೆ ಗುಡ್ ಬೈ ಹೇಳಿದ್ದಾರೆ.  ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಅವರು ನಾಳೆ ಬೆಳಿಗ್ಗೆ 12 ಗಂಟೆಗೆ ಪತ್ರಿಕಾಘೋಷ್ಠಿ ಕರೆದಿದ್ದಾರೆ. ಕಾಂಗ್ರೆಸ್ ನಲ್ಲಿ ಪ್ರಭಾವಿ ನಾಯಕರಾಗಿರುವ ಎಸ್. ಎಂ ಕೃಷ್ಣ ರಾಜೀನಾಮೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದು ಚರ್ಚೆಗೆ ಗ್ರಾಸವಾಗಿದೆ .

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದನಂತರ ತಮ್ಮನ್ನು ರಾಜಕೀಯವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂಬ ಅಸಮಾಧಾನ ಕೃಷ್ಣ ಅವರನ್ನು ಕಾಡಿತ್ತು.  ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.  ಎಸ್. ಎಂ. ಕೃಷ್ಣ ರಾಜೀನಾಮೆ ವಿಷಯ ಬಹಿರಂಗವಾಗುತ್ತಿದ್ದಂತೆ ಹಿರಿಯ ನಾಯಕರು ಅವರ ಮನೆಗೆ ದೌಡಾಯಿಸಿ ಮನವೊಲಿಸುವ ಪ್ರಯತ್ನ ನಡೆಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin