ಕಾಂಗ್ರೆಸ್-ಜೆಡಿಎಸ್‍ನಿಂದ ಕುಟುಂಬ ರಾಜಕಾರಣ : ಪ್ರಕಾಶ್ ಜಾವ್ಡೇಕರ್

ಈ ಸುದ್ದಿಯನ್ನು ಶೇರ್ ಮಾಡಿ

Prakash-Jawdekar--01
ಚಿಕ್ಕಮಗಳೂರು, ಜ.23- ಕಾಂಗ್ರೆಸ್ ಮತ್ತು ಜೆಡಿಎಸ್‍ನಲ್ಲಿ ಕುಟುಂಬ ರಾಜಕಾರಣ ಮತ್ತು ಹಣ ಪ್ರಧಾನವಾಗಿದ್ದು , ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಟೀಕಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಜೆಡಿಎಸ್‍ನವರು ಮುಂದಿನ ಚುನಾವಣೆಯಲ್ಲಿ ಮತದಾರರಿಗೆ 1 ಸಾವಿರ ರೂ. ಆಮಿಷವೊಡ್ಡಿದರೆ ಕಾಂಗ್ರೆಸ್‍ನವರು 2 ಸಾವಿರ ಆಮಿಷ ಒಡ್ಡುತ್ತಾರೆ ಎಂದು ಗಂಭೀರ ಆರೋಪ ಮಾಡಿದರು.

ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮಣಿಸಲು ಕಾರ್ಯಕರ್ತರು ಪಣ ತೊಟ್ಟು ನಿಂತಿದ್ದಾರೆ ಎಂದರು. ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ 3500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯ ಬರಗಾಲದಿಂದ ಬೆಳೆ ನಷ್ಟದಿಂದಾಗಿ ರೈತರು ಕಂಗಾಲಾಗಿದ್ದಾರೆ. ದತ್ತ ಪೀಠದ ಸಮಸ್ಯೆ ಬಗೆಹರಿಸಲು ಸುಪ್ರೀಂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ್ದರೂ ಕ್ರಮ ವಹಿಸಿಲ್ಲ. ಚಿಕ್ಕಮಗಳೂರು ಜಿಲ್ಲೆ ಇಂದಿರಾಗಾಂಧಿ ಅವರ ಕಾಲದಲ್ಲಿ ಭದ್ರಕೋಟೆಯಾಗಿತ್ತು. ಇಂದು ಬಿಜೆಪಿಯ ಭದ್ರಕೋಟೆಯಾಗಿದೆ. ಇದನ್ನು ಮುಂದುವರೆಸಿಕೊಂಡು ಹೋಗಬೇಕು. ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಪಕ್ಷವನ್ನು ಸಜ್ಜುಗೊಳಿಸಬೇಕೆಂದು ಕರೆ ನೀಡಿದರು. ಸಂಸದೆ ಶೋಭಾ ಕರಂದ್ಲಾಜೆ , ಶಾಸಕರಾದ ಸಿ.ಟಿ.ರವಿ , ಜೀವರಾಜ್, ಪ್ರಾಣೇಶ್, ಎಚ್.ಡಿ.ತಮ್ಮಯ್ಯ ಮುಂತಾದವರು ಉಪಸ್ಥಿತರಿದ್ದರು.

Facebook Comments

Sri Raghav

Admin