ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ, 15 ಮಂದಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

political-Fight
ಮೈಸೂರು, ಮೇ 6- ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ 15 ಮಂದಿ ಗಾಯಗೊಂಡಿದ್ದು, ಈ ಸಂಬಂಧ ಎರಡೂ ಕಡೆಯವರಿಂದ ದೂರು- ಪ್ರತಿದೂರು ದಾಖಲಾಗಿದೆ. ಮೈಸೂರಿನ ನಾಗನಹಳ್ಳಿಯಲ್ಲಿ ನಿನ್ನೆ ದರ್ಶನ್ ಪ್ರಚಾರ ನಡೆಸಿ ಹೋದ ನಂತರ ಗಲಾಟೆ ಮಾಡಿಕೊಂಡಿರುವ ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ಮಾರಾಮಾರಿ ನಡೆಸಿದ್ದಾರೆ.

ಈ ವೇಳೆ ಜೆಡಿಎಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್‍ನ ಕೆಲವರು ಹಲ್ಲೆ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಜೆಡಿಎಸ್‍ನವರು ಹಲ್ಲೆ ಮಾಡಿದ್ದಾರೆ. ಈ ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು, ಕೆಆರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin