ಬಿಬಿಎಂಪಿ ಕೇಂದ್ರ ಕಚೇರಿಗೆ ಬೀಗ ಹಾಕಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

BBMP-Protest--01

ಬೆಂಗಳೂರು, ಅ.11- ನಗರದ ರಸ್ತೆಗಳು ಗುಂಡಿ ಬಿದ್ದು 8 ಅಮಾಯಕರು ಪ್ರಾಣ ಕಳೆದುಕೊಂಡಿದ್ದರೂ ಕಣ್ಮುಚಿ ಕುಳಿತಿರುವ ಕಾಂಗ್ರೆಸ್ ಆಡಳಿತ ಧೋರಣೆಯನ್ನು ಖಂಡಿಸಿ ಮಾಜಿ ಡಿಸಿಎಂ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬಿಬಿಎಂಪಿ ಕೇಂದ್ರ ಕಚೇರಿ ಮುಖ್ಯದ್ವಾರಕ್ಕೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ಮುಖಂಡರು ದಿಕ್ಕಾರದ ಘೋಷಣೆಗಳನ್ನು ಕೂಗಿದರು. ಮುಚ್ಚಿಮುಚ್ಚಿ ಬಿಬಿಎಂಪಿ ಕಚೇರಿ ಮುಚ್ಚಿ ಎಂದು ಘೋಷಣೆಗಳನ್ನು ಕೂಗುತ್ತಾ ಕಾರ್ಯಕರ್ತರು ಕಚೇರಿ ಒಳನುಗ್ಗಲು ಯತ್ನಿಸಿದರು. ಈ ನಡುವೆ ಪೊಲೀಸರು ಹಾಗೂ ಬಿಬಿಎಂಪಿ ಕಾರ್ಯಕರ್ತರು, ಪ್ರತಿಭಟನಾಕಾರರನ್ನು ತಡೆಯಲು ಮುಂದಾದರೂ ಪ್ರಯೋಜನವಾಗಲಿಲ್ಲ.

ಬಿಗಿ ಪೊಲೀಸ್ ಭದ್ರತೆ ಇದ್ದರೂ, ಅದನ್ನು ಲೆಕ್ಕಿಸದೆ ಬಿಬಿಎಂಪಿ ಕೇಂದ್ರ ಕಚೇರಿಯ ಮುಖ್ಯ ದ್ವಾರಕ್ಕೆ ಕಾರ್ಯಕರ್ತರು ಬೀಗ ಜಡಿದರು. ಆದರೆ ಬಿಜೆಪಿ ಕಾರ್ಯಕರ್ತರು ಮುಖ್ಯದ್ವಾರದ ಮೂಲಕ ಒಳನುಗ್ಗುವುದನ್ನು ತಪ್ಪಿಸುವ ಸಲುವಾಗಿ ಕಾಂಗ್ರೆಸ್ಸಿಗರು ಹಾಗೂ ಕೆಲ ಸಿಬ್ಬಂದಿ ಪಾಲಿಕೆಯ ನಾಲ್ಕು ದ್ವಾರಗಳಿಗೂ ಒಳಗಿನಿಂದ ಬೀಗ ಹಾಕಿದ್ದರು. ಇದರಿಂದ ಕೆರಳಿದ ಕಾರ್ಯಕರ್ತರು, ಬಿಬಿಎಂಪಿ ಆಡಳಿತ ಹಾಗೂ ಕಾಂಗ್ರೆಸ್ ವಿರುದ್ಧ ದಿಕ್ಕಾರ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

Palya 06

ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಮಾತನಾಡಿ, ಇಂದು ಬೆಂಗಳೂರಿನ ಹೆಸರು ಹಾಳಾಗುತ್ತಿದೆ ಎಂದರೆ ಅದಕ್ಕೆ ಸಿಎಂ ಸಿದ್ದರಾಮಯ್ಯನವರೇ ನೇರ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಬೆಳಗ್ಗೆ ಎದ್ದು ಬೈಕ್ ಹೊರಗೆ ತೆಗೆದರೆ ಮನೆಗೆ ಹೋಗುವ ಗ್ಯಾರಂಟಿ ಇಲ್ಲ ಎಂಬಂತಾಗಿ ಬಿಟ್ಟಿದೆ ನಮ್ಮ ನಗರದ ಪರಿಸ್ಥಿತಿ. ಗುಂಡಿಗೆ ಬಿದ್ದು ಜನರು ಸತ್ತಿಲ್ಲ. ತಮ್ಮ ತಪ್ಪಿನಿಂದ ಸತ್ತಿದ್ದಾರೆ ಎಂದು ಹೇಳುವ ಮೂಲಕ ಸಚಿವ ಕೆ.ಜೆ.ಜಾರ್ಜ್ ಅವರು ಪ್ರಾಣಕ್ಕೆ ಬೆಲೆಯಿಲ್ಲದಂತೆ ಮಾತನಾಡಿದ್ದಾರೆ ಎಂದು ಟೀಕಿಸಿದರು.

ವಿರೋಧ ಪಕ್ಷದವರು ನೀವೇ ಗುಂಡಿ ಮುಚ್ಚಿ ಎಂದು ಹೇಳಲಾಗುತ್ತಿದೆ. ನಾವು ಸಿದ್ದರಿದ್ದೇವೆ ಕಾಂಗ್ರೆಸ್ ಪಕ್ಷವನ್ನು ಮುಚ್ಚೋಕೆ. ಫೈಥಾನ್ ಬಳಸಿಕೊಂಡು ದಿನಕ್ಕೆ 4 ಕಿ.ಮೀ ಗುಂಡಿ ಮುಚ್ಚಲು ಸಾಧ್ಯವಿಲ್ಲ. ಜನರ ಸಾವು ತಪ್ಪಿಸಲು ಪೊಲೀಸರು ಗುಂಡಿ ಮುಚ್ಚುವ ಕೆಲಸ ಮಾಡುತ್ತಿದ್ದಾರೆ. ನಾಚಿಕೆಯಾಗಬೇಕು ಈ ಸರ್ಕಾರಕ್ಕೆ ಎಂದು ಕಿಡಿಕಾರಿದರು. 22 ಕೋಟಿ ಗುಂಡಿ ಮುಚ್ಚಲೆಂದು ಹಣ ಬಳಕೆ ಮಾಡಲಾಗುತ್ತಿದೆ. ಆದರೆ ಗುಂಡಿ ಮುಚ್ಚಿದ್ದು ಕಾಣುತ್ತಿಲ್ಲ. ಈ ಮೂಲಕ ಸಾರ್ವಜನಿಕರ ಹಣವನ್ನು ಕೋಟಿ ಕೋಟಿ ಹಣ ಲೂಟಿ ಮಾಡುತ್ತಿದ್ದಾರೆ ಎಂದು ದೂರಿದರು.

Palya 07

ಬೆಂಗಳೂರು ಅಭಿವೃದ್ಧಿಗೆ 4 ಸಾವಿರ ಕೋಟಿ ನೀಡಿರುವುದಾಗಿ ಸಿಎಂ ಹೇಳುತ್ತಾರೆ. ಆದರೆ ಯಾವುದೇ ಅಭಿವೃದ್ದಿ ಆಗಿಲ್ಲ . ಹಾಗಾದರೆ ಆ ಹಣ ಏನಾಯ್ತು ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಅಶೋಕ್ ಒತ್ತಾಯಿಸಿದರು.

Paly 8

ನಾಳೆ ಮತ್ತೆ ಪ್ರತಿಭಟನೆ:

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ ಪ್ರತಿಭಟನೆ ನಡೆಯಲಿದೆ. ನಮ್ಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ನಿರಂತರವಾಗಿರುತ್ತದೆ. ಪಾಲಿಕೆ ಬಾಗಿಲಿಗೆ ಬೀಗ ಜಡಿದು ಹೋರಾಟ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಶಾಸಕ ಅರವಿಂದ ಲಿಂಬಾವಳಿ ಮಾತನಾಡಿ, ಇಡೀ ಪ್ರಪಂಚದಲ್ಲೇ ರಸ್ತೆ ಗುಂಡಿಗೆ ಬಿದ್ದು ಜನ ಸಾಯ್ತಾರೆ ಅಂದ್ರೆ ಅದು ನಮ್ಮ ಬೆಂಗಳೂರಿನಲ್ಲಿ ಮಾತ್ರ. ಮಳೆಹಾನಿಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಬಹಳಷ್ಟು ಹಾನಿಯಾಗಿದೆ. ಜನ ತತ್ತರಿಸಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಯಿಂದ ಎಚ್ಚೆತ್ತುಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸತೀಶ್ ರೆಡ್ಡಿ ಮಾತನಾಡಿ, ದಿನನಿತ್ಯ ಒಂದಲ್ಲ ಒಂದು ಕಡೆ ರಸ್ತೆ ಗುಂಡಿಗೆ ಬಿದ್ದು ಜನ ಸಾಯುತ್ತಿದ್ದಾರೆ. ಹಾಗಾಗಿ ಕಾಂಗ್ರೆಸ್ ಸರ್ಕಾರಕ್ಕೆ ಇಡೀ ಶಾಪ ಹಾಕಿ ಸಿದ್ದರಾಮಯ್ಯ ಸರ್ಕಾರ ಮೊದಲು ತೊಲಗಲಿ ಎಂದು ಹಾರೈಸುತ್ತಿದ್ದಾರೆ ಎಂದು ಹೇಳಿದರು.  ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಮಾತನಾಡಿ, ರಸ್ತೆ ಗುಂಡಿ ಮುಚ್ಚೋ ಕಾಮಗಾರಿ, ಕಸ ವಿಲೇವಾರಿ ಕಾಮಗಾರಿ ಸೇರಿದಂತೆ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾಮಗಾರಿಗಳಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದೆ ಎಂದು ನೇರ ಆರೋಪ ಮಾಡಿದರು. ಎರಡು ಸಾವರಿಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ರಸ್ತೆ ಗುಂಡಿ ಮುಚ್ಚುವರೆಗೂ ನಾವು ಹೋರಾಟ ಮಾಡುತ್ತೇವೆ ಎಂದು ಆಕ್ರೋಶ ವ್ಯ್ಕತಪಡಿಸಿದರು.
ಅಪವಿತ್ರ ಮೈತ್ರಿ:

ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಿತ್ತು. ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡು ಆಡಳಿತ ನಡೆಸುತ್ತಿವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದರು.  ಈ ಎರಡು ಪಕ್ಷಗಳಿಗೆ ಅಭಿವೃದ್ದಿ ಕೆಲಸ ಮಾಡುವುದಕ್ಕಿಂತ ಹಣ ಮಾಡುವುದೇ ಮುಖ್ಯವಾಗಿಬಿಟ್ಟಿದೆ. ಬೆಂಗಳೂರಿನ ರಸ್ತೆಗಳಲ್ಲಿ ಓಡಾಡಲು ಸಾಧ್ಯವಿಲ್ಲದಂತಾಗಿದೆ. ಎಲ್ಲಿ ನೋಡಿದರಲ್ಲಿ ರಸ್ತೆಗುಂಡಿ, ವಿಮಾನ ನಿಲ್ದಾಣಕ್ಕೆ ಹೋಗಲು 2 ಗಂಟೆ ಬೇಕು. ಈ ಸಮಯದಲ್ಲಿ ಮೈಸೂರಿಗೆ ಹೋಗಿಬಿಡಬಹುದು ಎಂದು ಹೇಳಿದರು.

ಎಇಇ , ಇಂಜಿನಿಯರ್‍ಗಳು ಎರಡು ಲಕ್ಷ ಕಪ್ಪ ಕೊಡಬೇಕಿದೆ. ಕಪ್ಪ ಕೊಡದ ಹೋದರೆ ವರ್ಗಾವಣೆ ಭಾಗ್ಯ ದೊರೆಯಲಿದೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದರು.  ಪ್ರತಿಭಟನೆ ವೇಳೆ ಬಿಜೆಪಿ ಮುಖಂಡರು ಹಾಗೂ ಕೆಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

Facebook Comments

Sri Raghav

Admin