ಕಾಗದ ರಹಿತ ವ್ಯವಸ್ಥೆಗೆ ವಿಧಾನಮಂಡಲ ಸಜ್ಜು

ಈ ಸುದ್ದಿಯನ್ನು ಶೇರ್ ಮಾಡಿ

Vidhanasabha

ಬೆಂಗಳೂರು,ಆ.22- ರಾಜ್ಯ ವಿಧಾನಮಂಡಲದಲ್ಲಿ ಕಾಗದ ರಹಿತ ವ್ಯವಸ್ಥೆ ಜಾರಿಗೆ ತರಲು ಉದ್ದೇಶಿಸಲಾಗಿದೆ. ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರಿಗೆ ಆನ್ಲೈನ್ ಮೂಲಕವೇ ಪ್ರಶ್ನೋತ್ತರಗಳ ಮಾಹಿತಿಯನ್ನು ಒದಗಿಸಲು ಚಿಂತಿಸಲಾಗುತ್ತಿದೆ. ರಾಜ್ಯ ವಿಧಾನಮಂಡಲದ ಗ್ರಂಥಾಲಯ ಸಮಿತಿಯು ಈ ಬಗ್ಗೆ ಸಿದ್ಧತೆ ನಡೆಸಿದೆ. ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಧ್ಯಕ್ಷರಾಗಿರುವ ಹಾಗೂ ವಿಧಾನಸಭಾ ಅಧ್ಯಕ್ಷ ಕೆ.ಬಿ.ಕೋಳಿವಾಡ ಅವರು ಸದಸ್ಯರಾಗಿರುವ ಗ್ರಂಥಾಲಯ ಸಮಿತಿ ಬುಧವಾರ ಮಧ್ಯಾಹ್ನ ಸಭೆ ಸೇರಿ ಈ ಸಂಬಂಧ ಸಮಾಲೋಚನೆ ನಡೆಸಲಿದೆ.  ಕಾಗದ ರಹಿತ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆ ಈಗಾಗಲೇ ಸಿದ್ಧವಾಗಿದ್ದರೂ ಕೂಡ ಅನುದಾನದ ಕೊರತೆಯಿಂದಾಗಿ ಇದುವರೆಗೂ ಅನುಷ್ಠಾನವಾಗಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.

ಹಿಮಾಚಲ ಪ್ರದೇಶದಲ್ಲಿ ಇಂತಹ ವ್ಯವಸ್ಥೆ ಜಾರಿಯಲ್ಲಿದ್ದು, ಅದೇ ಮಾದರಿಯಲ್ಲಿ ಶಾಸಕರಿಗೆ ಆನ್ಲೈನ್ ಮೂಲಕವೇ ಪ್ರಶ್ನೋತ್ತರ ಸೇರಿದಂತೆ ಅಗತ್ಯ ಮಾಹಿತಿ ಒದಗಿಸಲು ಉದ್ದೇಶಿಸಲಾಗಿದೆ.
ಗ್ರಂಥಾಲಯ ಸಮಿತಿ ಸಭೆಯಲ್ಲಿ ಈ ಬಗ್ಗೆ ಸಮಗ್ರವಾಗಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

► Follow us on –  Facebook / Twitter  / Google+

Facebook Comments

Sri Raghav

Admin