ಕಾನೂನು ಸುವ್ಯವಸ್ಥೆ ಹದಗೆಟ್ಟರೂ ಕಣ್ಣು ಮುಚ್ಚಿ ಕುಳಿತಿದೆ ಸರ್ಕಾರ : ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

eshwarappa
ಶಿವಮೊಗ್ಗ, ನ.2-ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆದರೆ, ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಕಗ್ಗೊಲೆ ನಡೆಯುತ್ತಿದೆ. ರುದ್ರೇಶ್ ಕೊಲೆ ಖಂಡನೀಯ ಎಂದ ಅವರು, ಈ ಹಿನ್ನೆಲೆಯಲ್ಲಿ ಬಿಜೆಪಿ ನಿಯೋಗ ಈ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್‍ಸಿಂಗ್‍ಗೆ ದೂರು ಸಲ್ಲಿಸಲಿದೆ ಎಂದು ತಿಳಿಸಿದರು.

ಮಧ್ಯ ಪ್ರದೇಶದ ಎನ್‍ಕೌಂಟರ್ ಪ್ರಕರಣದಲ್ಲೂ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ಈಶ್ವರಪ್ಪ ರಾಜ್ಯದಲ್ಲಿ ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಮಿತಿಮೀರುತ್ತಿವೆ. ಅಪರಾಧಿಗಳಿಗೆ ಕಾನೂನಿನ ಭಯವಿಲ್ಲದಂತಾಗಿದೆ ಎಂದು ಆಕ್ಷೇಪಿಸಿದರು. ಮಾದಾರ ಚನ್ನಸ್ವಾಮಿ ಹಾಗೂ ಕಾಗಿನೆಲೆ ಸ್ವಾಮಿ ನೇತೃತ್ವದಲ್ಲಿ ರಾಯಣ್ಣ ಬ್ರಿಗೇಡ್ ಮುಂದುವರಿಯಲಿದೆ ಎಂದ ಅವರು, ಕರೆದರೆ ತಾವು ಕಾರ್ಯಕ್ರಮಕ್ಕೆ ತೆರಳುವುದಾಗಿ ಸ್ಪಷ್ಟನೆ ನೀಡಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಗೃಹ ಸಚಿವರು ಕಠಿಣ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin