ಕಾರಿಗೆ ಬೆಂಕಿ : ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪರಿಷತ್ ಅರುಣ್‍ ಶಹಪುರ

ಈ ಸುದ್ದಿಯನ್ನು ಶೇರ್ ಮಾಡಿ

Arun-shahapur

ವಿಜಯಪುರ, ನ.10- ಚಲಿಸುತ್ತಿದ್ದ ಸ್ಕಾರ್ಫಿಯೋಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ವಿಧಾನಪರಿಷತ್ ಸದಸ್ಯ ಅರುಣ್‍ಶಹಪುರ ಮತ್ತು ಕುಟುಂಬದವರು ಅದೃಷ್ಟವಶಾತ್ ಪಾರಾಗಿರುವ ಘಟನೆ ನಡೆದಿದೆ. ವಿಜಯಪುರದ ಗೋದಾವರಿ ಹೋಟೆಲ್ ಬಳಿ ಇಂದು ಅರುಣ್‍ಶಹಪುರ ಅವರು ತಮ್ಮ ಕುಟುಂಬದೊಂದಿಗೆ ಸ್ಕಾರ್ಫಿಯೋ ವಾಹನದಲ್ಲಿ ತೆರಳುತ್ತಿದ್ದಾಗ ಏಕಾಏಕಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಕಂಡ ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿದ್ದರಿಂದ ಕುಟುಂಬ ಸಮೇತ ಕಾರಿನಿಂದ ಹೊರ ಬರುವಂತಾಯಿತು. ಕೆಲವೇ ನಿಮಿಷಗಳಲ್ಲಿ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು.

► Follow us on –  Facebook / Twitter  / Google+

Facebook Comments

Sri Raghav

Admin