ಕಾರು ಅಪಘಾತದಲ್ಲಿ ಭೋವಿಪೀಠದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿಯವರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Accident--01

ಕುಣಿಗಲ್, ಫೆ.8- ಕಾರು ಅಪಘಾತದಲ್ಲಿ ಚಿತ್ರದುರ್ಗದ ಹಿಮ್ಮಡಿ ಗುರುಸಿದ್ದರಾಮೇಶ್ವರ ಭೋವಿಪೀಠದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಗಾಯಗೊಂಡಿದ್ದಾರೆ. ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿ ಬಳಿ ಇಂದು ಮುಂಜಾನೆ ಈ ಘಟನೆ ನಡೆದಿದೆ.  ಮಂಡ್ಯದಿಂದ ವಾಪಸ್ ಚಿತ್ರದುರ್ಗಕ್ಕೆ ಬರುವಾಗ ಹುಲಿಯೂರು ದುರ್ಗ ಸಮೀಪ ರಸ್ತೆ ಮಧ್ಯೆ ನಿಂತಿದ್ದ ಹಸುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಕಾರಿನ ಚಾಲಕ ವಾಹನವನ್ನು ಎಡಬದಿಗೆ ತಿರುಗಿಸಿದಾಗ ಅ ದು ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ ಎಂದು ತಿಳಿದುಬಂದಿದೆ.   ಇದನ್ನು ನೋಡಿದ ಸ್ಥಳೀಯರು ತಕ್ಷಣ ರಕ್ಷಣೆಗೆ ಬಂದು ಸಿದ್ದರಾಮೇಶ್ವರ ಸ್ವಾಮೀಜಿಯವರನ್ನು ಕುಣಿಗಲ್ ಆಸ್ಪತ್ರೆಗೆ ಕರೆತಂದಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ. ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin