ಕಾರು ಅಪಘಾತದಲ್ಲಿ ಸ್ವಲ್ಪದರಲ್ಲೇ ಪಾರಾದ ಮಂಡ್ಯ ಸಂಸದ ಪುಟ್ಟರಾಜು

ಈ ಸುದ್ದಿಯನ್ನು ಶೇರ್ ಮಾಡಿ

Puttaraju

ಮಂಡ್ಯ, ಅ.8- ಸಂಸದ ಸಿ.ಎಸ್.ಪುಟ್ಟರಾಜು ಅವರ ಕಾರು ಅಪಘಾತಕ್ಕೀಡಾಗಿದ್ದು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಕಾವೇರಿ ಜಲಾನಯನ ಪ್ರದೇಶಗಳ ವಾಸ್ತವ ಸ್ಥಿತಿ ಅಧ್ಯಯನ ನಡೆಸಲು ಆಗಮಿಸಿರುವ ಕೇಂದ್ರ ತಂಡದೊಂದಿಗೆ ತೆರಳುತ್ತಿದ್ದಾಗ ಕೆ.ಆರ್.ಪೇಟೆ ತಾಲ್ಲೂಕಿನ ಕೆ.ಮಲ್ಲೇನಹಳ್ಳಿ ಸಮೀಪ ಸಂಸದರ ಕಾರಿಗೆ ಹಿಂದೆ ಬರುತ್ತಿದ್ದ ಹೇಮಾವತಿ ಜಲಾನಯನ ಪ್ರದೇಶದ ಎಂಜಿಯರ್ ಕಾರು ಡಿಕ್ಕಿ ಹೊಡೆದಿದೆ.  ಡಿಕ್ಕಿ ಹೊಡೆದ ರಭಸಕ್ಕೆ ಸಂಸದರ ಇನ್ನೋವಾ ಕಾರು ಮುಂದೆ ಹೋಗುತ್ತಿದ್ದ ಪೊಲೀಸ್ ಜೀಪಿಗೆ ಡಿಕ್ಕಿ ಹೊಡೆದು ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  ನಂತರ ಬೇರೆ ಕಾರಿನಲ್ಲಿ ಸಂಸದರು ಕಾವೇರಿ ಜಲಾನಯನ ಪ್ರದೇಶಕ್ಕೆ ತೆರಳಿದರು.

► Follow us on –  Facebook / Twitter  / Google+

Facebook Comments

Sri Raghav

Admin