ಕಾರು ಅಪಘಾತ : ಪ್ರಾಣಾಪಾಯದಿಂದ ಪಾರಾದ ಸಚಿವ ಎಂ.ಬಿ.ಪಾಟೀಲ್

ಈ ಸುದ್ದಿಯನ್ನು ಶೇರ್ ಮಾಡಿ

MB-Patil

ವಿಜಯಪುರ. ಜ.14 : ಟೈರ್‌ ಸ್ಫೋಟಗೊಂಡ ಪರಿಣಾಮ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಪ್ರಯಾಣಿಸುತ್ತಿದ್ದ, ಕಾರ್ ಪಲ್ಟಿಯಾಗಿದ್ದು, ಸಚಿವರು ಸೇರಿದಂತೆ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸಚಿವರು ವಿಜಯಪುರದಿಂದ ಉತ್ತರ ಕನ್ನಡ ಜಿಲ್ಲೆಯ ಉಳವಿಯಲ್ಲಿ ಸಿದ್ಧರಾಮೇಶ್ವರ ಜಯಂತಿ ಉದ್ಘಾಟನೆಗೆ ತೆರಳುತಿದ್ದಾಗ ಘಟನೆ ನಡೆದಿದೆ ಎನ್ನಲಾಗಿದೆ. ಕೆರೂರು ಪಟ್ಟಣದ ಸಮೀಪ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ, ಟೈಯರ್ ಸ್ಪೋಟಗೊಂಡು, ಚಾಲಕನ ನಿಯಂತ್ರಣ ತಪ್ಪಿದ ಕಾರ್ ಪಲ್ಟಿಯಾಗಿದೆ.

ಕಾರಿನಲ್ಲಿ ಸಚಿವ ಎಂ.ಬಿ.ಪಾಟೀಲ್, ಚಾಲಕ ಶಂಕರ್, ಗನ್ ಮ್ಯಾನ್ ಬಿ. ಮಹಾಂತೇಶ್, ಸಿದ್ದಣ್ಣ ಸಕ್ಕರೆ, ಹಾಗೂ ಪ್ರಸನ್ನ ಪಾಟೀಲ್ ಅವರಿದ್ದು ಸಣ್ಣಪುಟ್ಟ ಗಾಯಗಳಾಗಿವೆ.  ಅಪಘಾತದ ಬಳಿಕ ಸಚಿವರು ಬೇರೆ ಕಾರಿನಲ್ಲಿ ತೆರಳಿದ್ದಾರೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಚಾಲಕ ಶಂಕರ್‌, ಗನ್‌ಮ್ಯಾನ್, ಛಾಯಾಗ್ರಾಹಕ ಪ್ರಸನ್ನ ಪಾಟೀಲ್‌‌, ಸಚಿವರ ಆಪ್ತ ಸಹಾಯಕ ಡಾ. ಮಹಾಂತೇಶ ಬಿರಾದಾರ, ಕಾಂಗ್ರೆಸ್ ಮುಖಂಡ ಸಿದ್ದಣ್ಣ ಸಕ್ರಿ ಸೇರಿದಂತೆ ಕಾರಿನಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin