ಕಾರು ಡಿಕ್ಕಿ : ಬೈಕ್ ಸವಾರ ಸಾವು
ಈ ಸುದ್ದಿಯನ್ನು ಶೇರ್ ಮಾಡಿ
ಹಾಸನ,ಆ.22-ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ನಡೆದಿದೆ. ಕಾರೇಕೆರೆ ನಿವಾಸಿ ಮಂಜು(27) ಮೃತಪಟ್ಟ ಯುವಕ. ಇಂದು ಬೆಳಗ್ಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಅತಿವೇಗವಾಗಿ ಬಂದ ಕಾರು ರಾಷ್ಟ್ರೀಯ ಹೆದ್ದಾರಿ 75ರ ಬಳಿ ಈತನಿಗೆ ಡಿಕ್ಕಿ ಹೊಡೆದಿದ್ದು, ಮಂಜು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
► Follow us on – Facebook / Twitter / Google+
Facebook Comments