ಕಾರ್ಪೊರೇಟ್ ಸಂಸ್ಥೆಗಳಿಗೆ ಶಾಲೆ ದತ್ತು ನೀಡುವ ಯೋಜನೆ ಪುನಾರಂಭ

ಈ ಸುದ್ದಿಯನ್ನು ಶೇರ್ ಮಾಡಿ

Govt

ಬೆಂಗಳೂರು, ಸೆ.24- ಕಾರ್ಪೊರೇಟ್ ಸಂಸ್ಥೆಗಳಿಗೆ ಸರ್ಕಾರಿ ಶಾಲೆಗಳನ್ನು ದತ್ತು ನೀಡುವ ಯೋಜನೆಯನ್ನು ಮುಂದಿನ ತಿಂಗಳಿನಿಂದ ಪುನರಾರಂಭಿಸುತ್ತಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್‍ಸೇಠ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಈ ಮೊದಲು ಜಾರಿಯಲ್ಲಿದ್ದ ಯೋಜನೆಯನ್ನು ಕೆಲ ಕಾಲ ಸ್ಥಗಿತಗೊಳಿಸಲಾಗಿತ್ತು. ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುತ್ತವೆ. ಮುಂದಿನ ತಿಂಗಳಿನಿಂದ ಈ ಯೋಜನೆಯನ್ನು ಮರುಆರಂಭಿಸಲಾಗುತ್ತಿದೆ ಎಂದು ಹೇಳಿದರು. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿ.18ರಂದು ರಾಯಚೂರಿನಲ್ಲಿ ನಡೆಯಲಿದ್ದು, ಇದಕ್ಕೆ ಅನುದಾನವನ್ನು 2ಕೋಟಿಯಿಂದ 10ಕೋಟಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವಂತೆಯೂ ಅವರನ್ನು ಆಹ್ವಾನಿಸಲಾಗಿದೆ ಎಂದರು.

ನಾನು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವನಾಗಿರುವುದರಿಂದ ಸಮ್ಮೇಳನದ ಯಶಸ್ವಿಗೆ ಹಗಲಿರುಳು ದುಡಿಯುತ್ತಿದ್ದೇನೆ ಎಂದು ಅವರು ಹೇಳಿದರು. ಕಾವೇರಿ ನದಿ ವಿವಾದದಲ್ಲಿ ಯಾರೂ ರಾಜಕಾರಣ ಮಾಡಬಾರದು. ನಿನ್ನೆ ವಿಧಾನಮಂಡಲ ಅಧಿವೇಶನದಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಸರ್ಕಾರ ರಾಜ್ಯದ ರೈತರ ಹಿತರಕ್ಷಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವುದರಿಂದ ಮಂಡ್ಯದಲ್ಲಿ ಮಾದೇಗೌಡರು ನಡೆಸುತ್ತಿರುವ ಪ್ರತಿಭಟನೆಯನ್ನು ಕೈ ಬಿಡುವಂತೆ ಅವರು ಮನವಿ ಮಾಡಿದರು.

► Follow us on –  Facebook / Twitter  / Google+

Facebook Comments

Sri Raghav

Admin