ಕಾರ್ಯಕರ್ತರನ್ನು ಕೊಲ್ಲುತ್ತಿದ್ದರೆ ನೋಡಿಕೊಂಡು ಸುಮ್ಮನಿರಲು ದಕ್ಷಿಣಕನ್ನಡದವರೇನು ಷಂಡರಾ…?
ಕಲಬುರಗಿ,ಜು.10-ನಮ್ಮ ಕಾರ್ಯಕರ್ತರನ್ನು ಕೊಲೆ ಮಾಡುತ್ತಿದ್ದರೆ ಅದನ್ನು ನೋಡಿಕೊಂಡು ಸುಮ್ಮನೆ ಕೂರಲು ದಕ್ಷಿಣ ಕನ್ನಡದವರೇನು ನಪುಂಸಕರಾ ಎಂದು ಸಂಸದೆ ಶೋಭಾ ಕರಂದ್ಲಾಜೆ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಲಬುರಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾವು ಇದುವರೆಗೂ ಸುಮ್ಮನೆ ಇದ್ದೆವು. ಆದರೆ ಸರ್ಕಾರ ಗಲಭೆ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಹರಿಹಾಯ್ದರು. ಕಳೆದ 42 ದಿನಗಳಿಂದಲೂ ನಾವು ಸರ್ಕಾರವನ್ನು ನಂಬಿಕೊಂಡು ಸುಮ್ಮನೆ ಇದ್ದೆವು. ಆದರೆ ಸರ್ಕಾರ ಸ್ವತಃ ಈ ಕೋಮುಗಲಭೆಗೆ ಪ್ರಚೋದನೆ ನೀಡುತ್ತಿರುವುದರಿಂದ ಇನ್ನು ನಾವು ಸುಮ್ಮನಿರಲು ಸಾಧ್ಯವಿಲ್ಲ. ಕೆಎಫ್ಡಿ, ಪಿಎಫ್ಐಗಳನಂತಹ ಸಂಘಟನೆಗಳ ವಿರುದ್ಧದ ಪ್ರಕರಣಗಳನ್ನೆಲ್ಲ ಸರ್ಕಾರ ವಾಪಸ್ ಪಡೆದಿದೆ.
ಬಿಜೆಪಿ ಹಾಗೂ ಆರ್ಎಸ್ಎಸ್ ಕಾರ್ಯಕರ್ತರನ್ನು ಹಾಡುಹಗಲೇ ಕೊಲೆ ಮಾಡುತ್ತಿದ್ದಾರೆ. ನಾವು ಕೂಡ ಸುಮ್ಮನಿದ್ದರೆ ಈ ಕೊಲೆಗಳು ಹೀಗೆ ಮುಂದುವರೆಯುತ್ತಲೇ ಇರುತ್ತವೆ. ಇಂತಹ ಘಟನೆಗಳನ್ನು ಖಂಡಿಸಿ ನಾವು ಪ್ರತಿಭಟನೆ ಮಾಡಲು ಹೊರಟರೆ ಅದಕ್ಕೆ ಅವಕಾಶವನ್ನೇ ನೀಡು ವುದಿಲ್ಲ. ಪ್ರತಿಭಟನೆಗಳನ್ನು ಹತ್ತಿಕ್ಕುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ವ್ಯವಸ್ಥಿತವಾಗಿ ಮಾಡುತ್ತಿದೆ ಎಂದು ಶೋಭಾ ಕರಂದ್ಲಾಜೆ ತೀವ್ರ ವಾಗ್ದಾಳಿ ನಡೆಸಿದರು.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗಲಭೆಗಳನ್ನು ಹತ್ತಿಕ್ಕಿ ಪರಿಸ್ಥಿತಿ ನಿಭಾಯಿಸುವಲ್ಲಿ ಪೊಲೀಸರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಇನ್ನು ಮುಂದೆಯಾದರೂ ಈ ರೀತಿ ಕೊಲೆಗಳು, ಪುನಾರಾವರ್ತನೆಯಾಗದಂತೆ ಎಚ್ಚರವಹಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸಂಸದೆ ಎಚ್ಚರಿಕೆ ನೀಡಿದರು. ನಿಭಾಯಿಸುವಲ್ಲಿ ಪೆÇಲೀಸರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಇನ್ನು ಮುಂದೆಯಾದರೂ ಈ ರೀತಿ ಕೊಲೆಗಳು, ಪುನಾರಾವರ್ತನೆಯಾಗದಂತೆ ಎಚ್ಚರವಹಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸಂಸದೆ ಎಚ್ಚರಿಕೆ ನೀಡಿದರು.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS