ಕಾಲುವೆಗಳಿಗೆ ನೀರು ಬಿಡಲು ಆಗ್ರಹಿಸಿ ಮಿನಿ ವಿಧಾನಸೌಧಕ್ಕೆ ಮುತ್ತಿಗೆ

ಈ ಸುದ್ದಿಯನ್ನು ಶೇರ್ ಮಾಡಿ

mini--vidhanasoudha

ಕೆ.ಆರ್.ಪೇಟೆ, ಆ.9- ರೈತರ ಮೇಲಿನ ಪೊಲೀಸ್  ದೌರ್ಜನ್ಯವನ್ನು ಖಂಡಿಸಿ ಹಾಗೂ ಹೇಮಾವತಿ ಅಣೆಕಟ್ಟೆಯಿಂದ ತಾಲೂಕಿನ ಕಾಲುವೆಗಳಿಗೆ ನೀರು ಬಿಡಲು ಕ್ರಮ ಕೈಗೊಳ್ಳದ ಕ್ರಮ ವಿರೋಧಿಸಿ ತಾಲೂಕು ರೈತಸಂಘದ ನೂರಾರು ಕಾರ್ಯಕರ್ತರು ಪಟ್ಟಣದ ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ಕರ್ನಾಟಕ ರಾಜ್ಯ ರೈತ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಂದಿನಿ ಜಯರಾಂ ಮತ್ತು ಜಿಲ್ಲಾ ರೈತಸಂಘದ ಅಧ್ಯಕ್ಷ ಎಂ.ವಿ.ರಾಜೇಗೌಡ ನೇತೃತ್ವದಲ್ಲಿ ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಧರಣಿ ನಡೆಸಿದ ನೂರಾರು ರೈತಸಂಘದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ತಕ್ಷಣ ಮಹದಾಯಿ ಚಳುವಳಿಗಾರರ ಮೇಲೆ ಹೂಡಿರುವ ಎಲ್ಲಾ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು.

 

ಬಂಧಿಸಿರುವ ರೈತರನ್ನು ಬೇಷರತ್ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ರಾಜ್ಯ ರೈತಸಂಘದ ಮಹಿಳಾ ಘಟಕದ ಅಧ್ಯಕ್ಷೆ ನಂದಿನಿಜಯರಾಂ ಮಾತನಾಡಿ, ಲಾಠಿ ಚಾರ್ಜಿಗೆ ಆದೇಶ ಮಾಡಿದ ಅಧಿಕಾರಿಯ ಹೆಸರನ್ನು ಬಹಿರಂಗಪಡಿಸಿ ಅವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.ಆ.12 ನೇ ತಾರಿಖಿನೊಳಗೆ ಸರ್ಕಾರ ಹೇಮಾವತಿ ಜಲಾಶಯದ ಕಾಲುವೆಗೆ ನೀರು ಹರಿಸಿ ಕೆರ-ಕಟ್ಟೆಗಳನ್ನು ತುಂಬಿಸಲು ಮುಂದಾಗಬೇಕು. ಇಲ್ಲದಿದ್ದರೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಿಷ್ಕರಿಸಿ ಕರಾಳ ದಿನವನ್ನು ನೀರಾವರಿ ಇಲಾಖೆಯ ಮುಂದೆ ಪ್ರತಿಭಟಿಸಲಾಗುವುದು ಎಂದು ತಿಳಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಕೆ.ರತ್ನ, ನೀರಾವರಿ ಇಇ ನಾರಾಯಣ್, ಎಇಇ ನೀಲೇಗೌಡ, ಸಹಾಯಕ ಎಂಜಿನಿಯರ್ ರವಿ ರೈತರ ಅಹವಾಲು ಸ್ವೀಕರಿಸಿದರು.ತಾಲೂಕು ರೈತಸಂಘದ ಅಧ್ಯಕ್ಷ ಮರುವನಹಳ್ಳಿ ಶಂಕರ್, ರೈತಸಂಘದ ಮುಖಂಡರಾದ ಕೆ.ಆರ್.ಜಯರಾಂ, ಎಲ್.ಬಿ.ಜಗದೀಶ್, ಬೂಕನಕೆರೆ ನಾಗರಾಜು, ಮಡುವಿನಕೋಡಿ ಪ್ರಕಾಶ್, ಮುದ್ದುಕುಮಾರ್, ನಗರೂರು ಕುಮಾರ್, ಸಿಂಧಘಟ್ಟ ರವಿ, ಮಂಜು, ಕಾರಿಗನಹಳ್ಳಿ ಪುಟ್ಟೇಗೌಡ, ಶಂಭುಲಿಂಗಪ್ಪ, ಹಕ್ಕಿಮಂಚನಹಳ್ಳಿ ಹೊನ್ನೇಗೌಡ, ಚಂದ್ರೇಗೌಡ ಮತ್ತಿತರರು ಸಭೆಯಲ್ಲಿ ಮಾತನಾಡಿ ಸರ್ಕಾರದ ರೈತ ವಿರೋಧಿ ನಡೆಯನ್ನು ಖಂಡಿಸಿದರು.

Facebook Comments

Sri Raghav

Admin