ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ದಂಪತಿ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

Kolar-New-x01

ಕೋಲಾರ,ಆ.26-ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗುತ್ತಿದ್ದ ಪತ್ನಿಯನ್ನು ರಕ್ಷಿಸಲು ಹೋಗಿದ್ದ ಪತಿಯೂ ಸಾವನ್ನಪ್ಪಿರುವ ಘಟನೆ ತಾಲೂಕಿನ ಹರಟಿ ಗ್ರಾಮದಲ್ಲಿ ನಡೆದಿದೆ. ಶ್ರೀರಾಮಪ್ಪ(50) ಲಲಿತಮ್ಮ(45) ಮೃತಪಟ್ಟ ದುರ್ದೈವಿಗಳು. ನಿನ್ನೆ ಇವರು ತಮ್ಮ ಜಮೀನಿನಲ್ಲಿ ಕೆಲಸ ಮಾಡುವುದಕ್ಕೆ ಹೋಗಿದ್ದರು. ಈ ವೇಳೆ ಲಲಿತಮ್ಮ ಕೃಷಿ ಹೊಂಡದಲ್ಲಿ ಕೈ ತೊಳೆಯಲು ಹೋಗಿದ್ದಾಗ ಅಯತಪ್ಪಿ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಸಹಾಯಕ್ಕಾಗಿ ಕೂಗಿಕೊಂಡಾಗ ಶ್ರೀರಾಮಪ್ಪ ಸ್ಥಳಕ್ಕೆ ಧಾವಿಸಿ ನೀರಿನಲ್ಲಿ ಮುಳುಗುತ್ತಿದ್ದ ಪತ್ನಿಯನ್ನು ರಕ್ಷಿಸಲು ಹೋದಾಗ ಅವರು ಕೂಡ ನೀರಿನಲ್ಲಿ ಮುಳುಗಿ ಇಬ್ಬರು ದಾರುಣ ಸಾವನ್ನಪ್ಪಿದ್ದಾರೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Facebook Comments

Sri Raghav

Admin