ಕಾಲೇಜು ವಿದ್ಯಾರ್ಥಿಗಳು ಗಾಂಜಾ ಮಾರಾಟ : ಡಿಸಿಐಬಿ ಪೊಲೀಸರು ಬಂಧನ
ಈ ಸುದ್ದಿಯನ್ನು ಶೇರ್ ಮಾಡಿ
ಶಿವಮೊಗ್ಗ, ಮಾ.11-ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ತಂಡವೊಂದನ್ನು ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ತಾಲೂಕಿನ ಉಕ್ಕುಂದ ಗ್ರಾಮದ ಹನುಮಂತಪ್ಪ, ಹರೀಶ, ಭದ್ರಾವತಿಯ ಹಸೀನಾಬಾನು, ದಿನೇಶ್ ಬಂಧಿತ ಆರೋಪಿಗಳು.ತಂಡದಲ್ಲಿದ್ದ ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ.ಡಿಸಿಐಬಿ ಇನ್ಸ್ಪೆಕ್ಟರ್ ಚಂದ್ರಶೇಖರ್ ಮತ್ತು ಸಿಬ್ಬಂದಿ ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿ ತಂಡವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.ಆರೋಪಿಗಳು ಕಾಲೇಜುಗಳ ಮುಂದೆ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments