ಕಾಲೇಜು ಹಾಸ್ಟೆಲ್‍ಗಳಲ್ಲೂ ರಾಷ್ಟ್ರಗೀತೆ ಕಡ್ಡಾಯ

ಈ ಸುದ್ದಿಯನ್ನು ಶೇರ್ ಮಾಡಿ

National-Anthem--01
ರಾಜಸ್ತಾನ, ನ.28- ರಾಷ್ಟ್ರಗೀತೆಯನ್ನು ಎಲ್ಲಾ ಕಾಲೇಜು ಹಾಸ್ಟೆಲ್‍ಗಳಲ್ಲಿ ಹಾಡುವುದನ್ನು ಕಡ್ಡಾಯಗೊಳಿಸಿ ರಾಜಸ್ತಾನ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಎಲ್ಲ ಕಾಲೇಜು ಹಾಸ್ಟೆಲ್‍ಗಳಲ್ಲಿ ಬೆಳಗ್ಗೆ 7 ಗಂಟೆಗೆ ಹಾಡಬೇಕು ಎಂದು ಆದೇಶ ಹೊರಡಿಸಿರುವ ರಾಜಸ್ತಾನ ಮುಖ್ಯಮಂತ್ರಿ ವಸುಂದರ ರಾಜೆ ಅವರು ಪುನರ್ವಸತಿ ಕೇಂದ್ರ ಮತ್ತು ಮನ ಪರಿವರ್ತನಾ ಕೇಂದ್ರಗಳಲ್ಲೂ ರಾಷ್ಟ್ರಗೀತೆ ಹಾಡುವಂತೆ ಆದೇಶಿಸಿದ್ದಾರೆ.
ಎಲ್ಲ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿರುವ ಬೆನ್ನಲ್ಲೇ ರಾಜಸ್ತಾನ ಸರ್ಕಾರ ಕೈಗೊಂಡಿರುವ ಈ ನಿರ್ಧಾರಕ್ಕೆ ಕಾಂಗ್ರೆಸ್ ಖಂಡನೆ ವ್ಯಕ್ತಪಡಿಸಿದೆ.

Facebook Comments

Sri Raghav

Admin