ಕಾವೇರಿಗಾಗಿ ಕರ್ನಾಟಕ ಬಂದ್ (Live Updates)

ಈ ಸುದ್ದಿಯನ್ನು ಶೇರ್ ಮಾಡಿ

Save

ಬೆಂಗಳೂರು. ಸೆ.09 : ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸಲು ಕರ್ನಾಟಕ ಮುಂದಾದ್ದು. ಸಾವಿರಾರು ಕನ್ನಡ ಪರ ಸಂಘಟನೆಗಳು ಇಂದು  ಬಂದ್ ಆಚರಿಸುತ್ತಿವೆ. ಬಂದ್ ಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಮಾರು 1,200ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಸೂಚಿಸಿದ್ದು ಶುಕ್ರವಾರ(ಸೆಪ್ಟೆಂಬರ್ 09) ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ರಾಜ್ಯ ಸಂಪೂರ್ಣ ಸ್ತಬ್ಧವಾಗಿದೆ. ಬಂದ್ ದಿನದ ಬೆಳವಣಿಗೆಗಳು ಇಲ್ಲಿವೆ:

ಹೈಲೈಟ್ಸ್ :

 • ಬೆಂಗಳೂರನ್ನು”ಬಂದ್’ಳೂರು” ಎಂದು ವ್ಯಂಗ್ಯ ಮಾಡಿದ ಬಯೋಕಾನ್ ಮುಖ್ಯಸ್ಥೆ

 

 • ಇಬ್ಬರ ಆತ್ಮಹತ್ಯೆ ಯತ್ನ
  ಬೆಂಗಳೂರು, ಸೆ.9- ಕಾವೇರಿ ಅನ್ಯಾಯ ಖಂಡಿಸಿ ನಗರದ ಫ್ರೀಡಂಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರ್ಯಕರ್ತನೊಬ್ಬ ಹೊಟ್ಟೆಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾಗ ಏಕಾಏಕಿ ಪ್ರಭು ಚೋಳನಪಾಳ್ಯ ಎಂಬ ಯುವಕ ಹೊಟ್ಟೆಕೊಯ್ದುಕೊಂಡ.  ಹೊಟ್ಟೆಯಿಂದ ರಕ್ತ ಸುರಿಯುತ್ತಿದ್ದರೂ ಕಾವೇರಿಗಾಗಿ ರಕ್ತಕೊಡಲು ಸಿದ್ದ ಎಂದು ಆತ ಘೋಷಣೆ ಕೂಗತೊಡಗಿದ. ತಕ್ಷಣ ಪ್ರತಿಭಟನಾಕಾರರು ಹಾಗೂ ಪೊಲೀಸರು ಆತನನ್ನು ಆ್ಯಂಬೆಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಮಧ್ಯೆ ಮೈಸೂರಿನ ಕೆಆರ್‍ಎಸ್ ಸಮೀಪ ಪ್ರತಿಭಟನೆ ನಡೆಸುತ್ತಿದ್ದ ರೈತನೊಬ್ಬ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆದಿದೆ.

ಕೆಆರ್’ಎಸ್ ಅಣೆಕಟ್ಟೆಗೆ ಮುತ್ತಿಗೆ ಹಾಕಲೆತ್ನಿಸಿದವರ ಮೇಲೆ ಲಾಠಿಚಾರ್ಜ್

ss

ಬಂದ್ ಬಹುತೇಕ ಶಾಂತಿಯುತ: ಮೆಘರಿಕ್
ಬೆಂಗಳೂರು, ಸೆ.9-ನಗರದಲ್ಲಿ ಬಂದ್ ಶಾಂತಿಯುತವಾಗಿದೆ ಎಂದು ನಗರ ಪೆÇಲೀಸ್ ಆಯುಕ್ತ ಮೆಘರಿಕ್ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಈವರೆಗೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪ್ರತಿಭಟನಾಕಾರರು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದಾರೆ ಎಂದರು.
ಬಂದ್ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಸೂಕ್ತ ಬಿಗಿ ಪೆÇಲೀಸ್ ಬಂದೋಬಸ್ತ್ ಮಾಡಿದ್ದೇವೆ. ಹೆಚ್ಚುವರಿ ಪೊಲೀಸ್ ಆಯುಕ್ತರು, ಡಿಸಿಪಿಗಳು, ಎಸಿಪಿಗಳು ಖುದ್ದು ಗಸ್ತಿನಲ್ಲಿದ್ದಾರೆ ಎಂದು ಅವರು ಹೇಳಿದರು.

ಚಲನಚಿತ್ರ ವಾಣಿಜ್ಯ ಮಂಡಳಿ ಪ್ರತಿಭಟನೆ
ಚಲನಚಿತ್ರ ವಾಣಿಜ್ಯ ಮಂಡಳಿ ಪ್ರತಿಭಟನೆ
 • ಮೈಸೂರು ವರದಿ

  ಮೈಸೂರು, ಸೆ.9- ಕಾವೇರಿ ಬಂದ್‍ಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನ್ಯಾಯಾಲಯದ ಬಳಿ ವಿವಿಧ ಕನ್ನಡ ಪರ ಸಂಘಟನೆಗಳು, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಅಣುಕು ಶವಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಮತ್ತೊಂದೆಡೆ ಪ್ರತಿಭಟನಾಕಾರರು ಖಾಲಿ ಕೊಡಗಳ ಪ್ರದರ್ಶನ ನಡೆಸಿ ನಮಗೇ ನೀರಿಲ್ಲ, ನಿಮಗೆಲ್ಲಿಂದ ಕೊಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ನಗರದ ನ್ಯಾಯಾಲಯ ವೃತ್ತದ ಬಳಿ ಬ್ರಾಹ್ಮಣರ ಸಂಘದ ವತಿಯಿಂದ ಸಾಮೂಹಿಕ ಸಂಧ್ಯಾವಂದನೆ ನಡೆಸಲಾಯಿತು. ಮೈಸೂರಿನ ಕೂಟಗಳ್ಳಿ, ಚಾಮುಂಡಿಪುರಂ, ವಿದ್ಯಾರಣ್ಯಪುರಂ, ವಿಜಯನಗರ, ಕುವೆಂಪು ನಗರ, ಸರಸ್ವತಿಪುರಂ ಸೇರಿದಂತೆ ವಿವಿಧೆಡೆ ರಸ್ತೆ ಮಧ್ಯೆ ಪ್ರತಿಭಟನಾಕಾರರು ಟಯರ್‍ಗೆ ಬೆಂಕಿ ಹಚ್ಚಿ ತಮಿಳುನಾಡು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
  ಆ್ಯಂಬುಲೆನ್ಸ್‍ಗೂ ತಟ್ಟಿದ ಬಂದ್ ಬಿಸಿ: ಇಂದು ಬೆಳಗ್ಗೆ ನಗರದ ಧನ್ವಂತರಿ ರಸ್ತೆಯಲ್ಲಿರುವ ಗಣೇಶ ಪೆಟ್ರೋಲ್ ಬಂಕ್‍ಗೆ ಡೀಸಲ್ ಹಾಕಿಸಿಕೊಳ್ಳಲು ಬಂದ ಆ್ಯಂಬುಲೆನ್ಸ್‍ಗೆ, ಬಂಕ್‍ನವರು ಇಂದು ಬಂದ್ ಹಿನ್ನೆಲೆಯಲ್ಲಿ ಡೀಸಲ್ ಹಾಕುವುದಿಲ್ಲ ಎಂದು ಹೇಳಿದಾಗ ಅಲ್ಲೇ ಪ್ರತಿಭಟನೆ ನಡೆಸುತ್ತಿದ್ದ ಕೆಲವು ಸಂಘಟನೆಗಳು, ಈ ವಾಹನ ತುರ್ತು ಕೆಲಸ ಮಾಡುವುದರಿಂದ ಆ್ಯಂಬುಲೆನ್ಸ್‍ಗಳಿಗೆ ಡೀಸಲ್ ಹಾಕಿ ಎಂದು ಮನವೊಲಿಸುವಲ್ಲಿ ಯಶಸ್ವಿಯಾದರು.
  ನಗರ ಮತ್ತು ಹೊರವಲಯದಲ್ಲೂ ಸಹ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮತ್ತೊಂದೆಡೆ ಬಂದ್ ಬಿಸಿ ಚಾಮುಂಡಿ ಬೆಟ್ಟಕ್ಕೂ ತಟ್ಟಿದ್ದು, ಇಂದು ಶುಕ್ರವಾರವಾದ್ದರಿಂದ ನೂರಾರು ಭಕ್ತರು ದೇವಿ ದರ್ಶನಕ್ಕೆ ಆಗಮಿಸುತ್ತಿದ್ದರು. ಆದರೆ ಬಂದ್ ಹಿನ್ನೆಲೆಯಲ್ಲಿ ಯಾವುದೇ ವಾಹನ ಸೌಲಭ್ಯವಿಲ್ಲದ ಕಾರಣ ಭಕ್ತಾದಿಗಳಿಲ್ಲದೆ ಚಾಮುಂಡಿ ಬೆಟ್ಟ ಬಣಗುಡುತ್ತಿತ್ತು.
  ಮೈಸೂರು ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಮಹಾನಗರ ಪಾಲಿಕೆ, ನಗರದ ಬಹುತೇಕ ಸರ್ಕಾರಿ ಕಚೇರಿಗಳು ಬೆಳ್ಳಂಬೆಳಗ್ಗೆಯೇ ತೆರೆದು ಸ್ವಚ್ಛಗೊಳಿಸಿ ಮುಖ್ಯದ್ವಾರವನ್ನು ಮುಚ್ಚಲಾಗಿತ್ತು.
  ಸ್ವಂತ ವಾಹನವುಳ್ಳ ಸಿಬ್ಬಂದಿ ಮಾತ್ರ ಕಚೇರಿಗೆ ಆಗಮಿಸಿದ್ದರು. ಇನ್ನುಳಿದಂತÉ ಕಚೇರಿಯ ಮೇಲಧಿಕಾರಿಗಳು ಹೊರತುಪಡಿಸಿದರೆ ಸಿಬ್ಬಂದಿಗಳ ಹಾಜರಾತಿ ಕಡಿಮೆಯಾಗಿದ್ದು ಕಂಡುಬಂತು.
  ಜಿಲ್ಲಾಡಳಿತ ವತಿಯಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ಯಾವುದೇ ಶಿಕ್ಷಣ ಸಂಸ್ಥೆಗಳು ತೆರೆದಿರಲಿಲ್ಲ. ನಗರದ ಕೆಲವು ರಸ್ತೆಗಳಲ್ಲಿ ಹಿರಿಯರು-ಕಿರಿಯರು ಎನ್ನದೆ ಕ್ರಿಕೆಟ್ ಆಟ ವಾಡುತ್ತಿದ್ದು, ಕಂಡುಬಂತು.
  ಪ್ರತಿಬಾರಿ ಬಂದ್ ವೇಳೆ ಆಟೋ ಚಾಲಕರು ಪ್ರಯಾಣಿಕರಿಂದ ಸುಲಿಗೆ ಮಾಡುತ್ತಾರೆ ಎಂಬ ಆರೋಪ ಕೇಳಿ ಬರುತ್ತಿತ್ತು. ಆದರೆ ಇಂದು ಆಟೋ ಚಾಲಕರು, ಟ್ಯಾಕ್ಸಿ, ಕ್ಯಾಬ್ ಚಾಲಕರು ಸಂಪೂರ್ಣ ಬಂದ್‍ಗೆ ಸಹಮತ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ನಗರದಾದ್ಯಂತ ಎಲ್ಲಾ ರಸ್ತೆಗಳು ಬಿಕೋ ಎನ್ನುತ್ತಿದ್ದವು.
  ಹಲವು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ನಗರದ ಕೋಟೆ ಆಂಜನೇಯ ದೇವಾಲಯದ ಬಳಿ ಸೇರಿ ಅಲ್ಲಿಂದ ಮೆರವಣಿಗೆ ಹೊರಟು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
  ಅಲ್ಲದೆ ಕನ್ನಡ ಪರ ಸಂಘಟನೆಗಳು ನಗರದ ಕಾಡಾ ಕಚೇರಿಗೆ ಮುತ್ತಿಗೆ ಹಾಕಿ ನೀರು ಸ್ಥಗಿತಕ್ಕೆ ಒತ್ತಾಯಿಸಿದರು.

  ಪರದಾಟ: ಇಂದು ಬಂದ್ ಹಿನ್ನೆಲೆಯಲ್ಲಿ ರಾತ್ರಿಯೇ ಪ್ರಯಾಣ ಬೆಳೆಸಿ ಬೆಳಗಿನ ಜಾವ ಮೈಸೂರು ನಿಲ್ದಾಣಕ್ಕೆ ಬಂದು ತಲುಪಿದ ಪ್ರಯಾಣಿಕರು ತಮ್ಮ ಮನೆಗಳಿಗೆ ಹೋಗಲು ಯಾವುದೇ ವಾಹನಗಳಿಲ್ಲದೆ ಪರದಾಡುವಂತಾಯಿತು. ಇನ್ನು ಕೆಲ ಪ್ರಯಾಣಿಕರು ತಮ್ಮ ಸಂಬಂಧಿಕರನ್ನು ಕರೆಸಿಕೊಂಡು ಸ್ವಂತ ವಾಹನಗಳಲ್ಲಿ ಮನೆಗೆ ಸೇರಿಕೊಂಡರು.
  ಬಂದೋಬಸ್ತ್: ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ರೈಲ್ವೆ ನಿಲ್ದಾಣ, ಸಬರ್ ಬಸ್ ನಿಲ್ದಾಣ, ಬಸ್ ನಿಲ್ದಾಣ, ಅಶೋಕ ರಸ್ತೆಯಲ್ಲಿರುವ ಮುಖ್ಯ ಅಂಚೆ ಕಚೇರಿ, ಮೈಸೂರು ಅರಮನೆ, ಮೃಗಾಲಯ, ಆಕಾಶವಾಣಿ, ನ್ಯಾಯಾಲಯ, ಕೇಂದ್ರ ಸರ್ಕಾರದ ಕಚೇರಿಗಳ ಬಳಿ ಬಿಗಿ ಪೆÇಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
  ನಗರದ ಆಯಕಟ್ಟಿನ ಸ್ಥಳಗಳಲ್ಲಿ ನಿರಂತರ ಪೆÇಲೀಸ್ ವಾಹನಗಳು ಗಸ್ತು ತಿರುಗುತ್ತಿದ್ದವು.

 • ತುಮಕೂರು ವರದಿ : 

  ತುಮಕೂರು,ಸೆ.9-ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದಲೇ ಕನ್ನಡ ಸಂಘಟನೆಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು ಹಮ್ಮಿಕೊಂಡಿರುವ ಬಂದ್‍ನಿಂದ ನಗರ ಸಂಪೂರ್ಣ ಸ್ತಬ್ದವಾಗಿದೆ. ಬೆಳ್ಳಂಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 4 ಮತ್ತು 206, ತಮಕೂರು-ಶಿವಮೊಗ್ಗ ರಸ್ತೆ, ರಾಜ್ಯ ಹೆದ್ದಾರಿ ರಸ್ತೆಗಳನ್ನು ಸಂಪೂರ್ಣ ಮಾಡಿದ್ದರು.
  ತಿಪಟೂರು, ತುರುವೆಕೆರೆ, ಗುಬ್ಬಿ, ಶಿರಾ,ಮಧುಗಿರಿ, ಕೊರಟಗೆರೆ, ತುಮಕೂರು ಗ್ರಾಮಾಂತರ ಕುಣಿಗಲ್ ತಾಲ್ಲೂಕಿನ ಜನರು, ರೈತರು, ಸಂಪೂರ್ಣವಾಗಿ ಹೇಮಾವತಿ ಜಲಾಶಯವನ್ನೇ ಅವಲಂಬಿತರಾಗಿದ್ದಾರೆ. ಈಗ ನೀರನ್ನು ತಮಿಳುನಾಡಿಗೆ ಹರಿಸಿದರೆ ನಮ್ಮ ಗತಿಯೇನು ಎಂದು ಆಕ್ರೋಶ ವ್ಯಕ್ತಪಡಿಸಿದರು.   ಈ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ನೀರು ಹರಿಸಿರುವುದನ್ನು ರೈತರು ಹಾಗೂ ಜನಸಾಮಾನ್ಯರಿಗೆ ವಂಚಿಸಿದಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
  ತುಮಕೂರು ನಗರದಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ರಾಷ್ಟ್ರೀಯ ಹೆದ್ದಾರಿ 4 ಬಟವಾಡಿ ಬಳಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ರಘುರಾಮ್, ನೇತೃತ್ವದಲ್ಲಿ ನೂರಾರು ಮಂದಿ ರಸ್ತೆ ತಡೆದು ಟೈರ್‍ಗಳಿಗೆ ಬೆಂಕಿ ಹಚ್ಚಿದರು ಮತ್ತು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಳ ಪ್ರತಿಕೃತಿ ದಹಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.  ನಗರದ ಶಿವಕುಮಾರ್ ಸ್ವಾಮೀಜಿ ವೃತ್ತದಲ್ಲಿ ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ರಂಜನ್, ಸೋಮಶೇಖರ್ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ನೂರಾರು ಮಂದಿ ಸೇರಿ ಜಯಲಲಿತ ಅವರ ಶವಯಾತ್ರೆಯನ್ನು ಶಿವಕುಮಾರ್ ಸ್ವಾಮೀಜಿ ವೃತ್ತದಿಂದ ಡಿ.ಎಸ್.ರಸ್ತೆ ಮೂಲಕ ನಗರದ ಟೌನ್‍ಹಾಲ್ ವೃತ್ತದವರೆಗೆ ಮೆರವಣಿಗೆ ಮಾಡಿ ಪುರೋಹಿತರ ಮೂಲಕ ಜಯಲಲಿತ ಅವರ ಪ್ರತಿಕೃತಿಯನ್ನು ಸುಡಲಾಯಿತು.
  ಇದಕ್ಕೂ ಮುನ್ನ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡರ ಬಣದ ವಿಷ್ಣುವರ್ಧನ್ ನೇತೃತ್ವದಲ್ಲಿ ಜಯಲಲಿತಾರ ಪ್ರತಿಕೃತಿಯನ್ನು ನೇಣುಗಂಬಕ್ಕೆ ಏರಿಸಿ ಪ್ರತಿಭಟನೆ ನಡೆಸಿದರು.  ತುಮಕೂರು ನಗರದ ಗುಬ್ಬಿ ಗೇಟ್, ಕುಣಿಗಲ್ ರಸ್ತೆ, ಶಿರಾ ಗೇಟ್ ಸೇರಿದಂತೆ ಹಲವೆಡೆ ಕನ್ನಡಪರ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಬೈಕ್‍ಗಳಲ್ಲಿ ತೆರಳಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಜನರಲ್ಲಿ ಮನವಿ ಮಾಡಿದರು.
  ಪೊಲೀಸರ ಹದ್ದಿನಕಣ್ಣು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಬಿ.ಮಂಜುನಾಥ್, ಆಯಾಯ ವಿಭಾಗದ ಡಿವೈಎಸ್ಪಿಗಳಿಗೆ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿ ತೀವ್ರ ನಿಗಾ: ಬಂದ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೋಹನ್ ರಾಜ್ ಪೊಲೀಸರಿಂದ ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಮೂಲಕ ಜಿಲ್ಲೆಯ ಕ್ಷಣ ಕ್ಷಣದ ಬಂದ್‍ನ ಮಾಹಿತಿಯನ್ನು ರಾಜ್ಯ ಸರ್ಕಾರಕ್ಕೆ ರವಾನಿಸಲಾಗುತ್ತಿದೆ. ಹಾಗೂ ಜಿಲ್ಲೆಯಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.

 

 • ಬಂದ್ ಮಿಶ್ರ ಪ್ರತಿಭಟನೆ…. ತಮಿಳು ನಾಡಿಗೆ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಇವತ್ತು ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಿಶ್ರ ಪ್ರತ್ರಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆಯಿಂದ ಬಸ್ ಸಂಚಾರ ಎಂದಿನಂತೆ ಇದ್ದು, ನೆರೆಯ ಗೋವಾ-ಮಹಾರಾಷ್ಟ್ರ ರಾಜ್ಯಗಳಿಗೆ ತೆರಳಬೇಕಿದ್ದ ಬಸ್ ಗಳು ಹಾಗೂ ಜಿಲ್ಲೆಯ ಬೇರೆ ಬೇರೆ ಕಡೆಗಳಿಗೆ ತೆರಳಬೇಕಿದ್ದ ಬಸ್ ಗಳು ಎಂದಿನಂತೆ ಸಂಚರಿಸುತ್ತಿವೆ. ಇನ್ನೂ ಖಾಸಗಿ ಬಸ್ ಸಂಚಾರ, ಅಟೋ ಸಂಚಾರದಲ್ಲೂ ಸಹ ಯಾವುದೇ ವ್ಯತ್ಯಯ ಕಂಡು ಬಂದಿಲ್ಲ. ಇನ್ನೂ ಜಿಲ್ಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ಸಹ ರಜೆಯನ್ನು ನೀಡಿಲ್ಲ. [  ರಾಜಧಾನಿ ಬೆಂಗಳೂರು ಸಂಪೂರ್ಣ ಸ್ತಬ್ಧ   ]
ವಿಜಯಪುರದಲ್ಲಿ ರೋಸ್ ಕೊಟ್ಟು ಶಾಂತಿಯುತ ಪ್ರತಿಭಟನೆ
ವಿಜಯಪುರದಲ್ಲಿ ರೋಸ್ ಕೊಟ್ಟು ಶಾಂತಿಯುತ ಪ್ರತಿಭಟನೆ
 • ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಸೇವೆ.
  ತಮಿಳು ನಾಡಿಗೆ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಇವತ್ತು ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಿಶ್ರ ಪ್ರತ್ರಿಕ್ರಿಯೆ ವ್ಯಕ್ತವಾಗಿದೆ. ನಗರದ ಚನ್ಮಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಸಿಎಂ ಸಿದ್ದರಾಮಯ್ಯ ಹಾಗೂ ತಮಿಳುನಾಡು ಸಿಎಂ ಜಯಲಲಿತಾ ಭಾವಚಿತ್ರಕ್ಕೆ ಚಪ್ಪಲಿ ಸೇವೆ ನಡೆಸಿದ್ರು. ನಂತರ ಇಬ್ಬರ ಭಾವಚಿತ್ರವನ್ನು ಬೆಂಕಿಯಲ್ಲಿ ದಹಿಸಿ ತಮ್ಮ ಆಕ್ರೋಶ ಹೊರ ಹಾಕಿದ್ರು. ಸರ್ಕಾರದ ವಿರುದ್ಧ ಕರವೇ ಕಾರ್ಯಕರ್ತರು ಘೋಷಣೆ ಕೂಗಿದ್ದರು. [  ಶಾಂತಿಯುತ ಬಂದ್‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ  ]
ಅತ್ತಿಬೇಲೆಯಲ್ಲಿ ಅಖಿಲ ಕರ್ನಾಟಕ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಂದ ಪ್ರತಿಭಟನೆ..!!
ಅತ್ತಿಬೇಲೆಯಲ್ಲಿ ಅಖಿಲ ಕರ್ನಾಟಕ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಂದ ಪ್ರತಿಭಟನೆ..!!

 

 • ಮಂಡ್ಯದಲ್ಲಿ ಪ್ರತಿಭಟನಾಕಾರರೋರ್ವರು ಕೈಕೊಯ್ದುಕೊಳ್ಳಲು ಯತ್ನಿಸಿದ ಘಟನೆಯೂ ನಡೆದಿದೆ.

Cr4fkMzUkAAqU9o (1)

 • ರಾಜ್ಯದಲ್ಲಿ ಕೆಲ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲ ಕಡೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆಯಲ್ಲದೇ ಸರ್ಕಾರಿ ಕಛೇರಿ ಹಾಗೂ ಬ್ಯಾಂಕ್ ಗಳೂ ಸಹ ಕಾರ್ಯ ನಿರ್ವಹಿಸುತ್ತಿಲ್ಲ.
 • ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್ ವತಿಯಿಂದ ಮೈಸೂರು ಬ್ಯಾಂಕ್ ವೃತ್ತದ ಬಳಿ ಬೃಹತ್ ಪ್ರತಿಭಟನೆ
  ಬೆಂಗಳೂರು, ಸೆ.9- ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಖಂಡಿಸಿ ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್ ಮೈಸೂರು ಬ್ಯಾಂಕ್ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಸಿತು.  ಟ್ರಸ್ಟ್ ಅಧ್ಯಕ್ಷ ಸಿ.ವಿ.ದೇವರಾಜ್ ನೇತೃತ್ವದಲ್ಲಿ ಕೆಆರ್ ಮಾರುಕಟ್ಟೆಯಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಬೃಹತ್ ಪ್ರತಿಭಟನೆ ನಡೆಸಿ ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕಾಗುತ್ತಿರುವ ಅನ್ಯಾಯವನ್ನು ಖಂಡಿಸಲಾಯಿತು. ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ತಲಕಾಡು ಚಿಕ್ಕರಂಗೇಗೌಡ, ಪಾಲನೇತ್ರ, ಗುರುದೇವ್ ನಾರಾಯಣ್‍ಕುಮಾರ್ ಮುಂತಾದವರು ಪಾಲ್ಗೊಂಡು ರಾಜ್ಯಕ್ಕಾಗುತ್ತಿರುವ ಅನ್ಯಾಯವನ್ನು ಖಂಡಿಸಿದರು.
  ಕಾವೇರಿ ವಿವಾದದಲ್ಲಿ ತಮಿಳುನಾಡು ಪದೇ ಪದೇ ಕ್ಯಾತೆ ತೆಗೆಯುತ್ತಿದ್ದು, ಸುಪ್ರೀಂಕೋರ್ಟ್‍ನಲ್ಲಿ ಸಮರ್ಪಕವಾಗಿ ವಾದ ಮಂಡಿಸುವಲ್ಲಿ ನಮ್ಮ ವಕೀಲರು ಕೂಡ ವಿಫಲರಾಗಿದ್ದಾರೆ. ರಾಜ್ಯ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ಕೂಡಲೇ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಟೌನ್ ಹಾಲ್ ಬಳಿ ಮೆರವಣಿಗೆ
ಟೌನ್ ಹಾಲ್ ಬಳಿ ಮೆರವಣಿಗೆ
 • ಬಳ್ಳಾರಿಯಲ್ಲಿ ತಮಿಳುನಾಡು ನೋಂದಣಿ ಹೊಂದಿದ್ದ ಲಾರಿಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಯೂ ನಡೆದಿದೆ.
ಮಂಡ್ಯದಲ್ಲಿ ಮಧು ಬಂಗಾರಪ್ಪ, ಜಿ ಮಾದೇಗೌಡ ಪ್ರತಿಭಟನೆ
ಮಂಡ್ಯದಲ್ಲಿ ಮಧು ಬಂಗಾರಪ್ಪ, ಜಿ ಮಾದೇಗೌಡ ಪ್ರತಿಭಟನೆ
 • ಟ್ಯಾಕ್ಸಿ ಸಂಚಾರ ಇಲ್ಲದ ಕಾರಣ ವಿಮಾನದಲ್ಲಿ ಇಂದು ಸಂಜೆ 5 ಗಂಟೆಗೆ ತೆರಳಬೇಕಿದ್ದವರು ಬಂದ್ ಆರಂಭಕ್ಕೂ ಮುನ್ನವೇ ಬೆಳಿಗ್ಗೆಯೇ ವಿಮಾನ ನಿಲ್ದಾಣ ತಲುಪಿ ಅಲ್ಲಿಯೇ ಕಾಲ ಕಳೆಯುತ್ತಿದ್ದಾರೆ.
Malla
ಬಾಗಿಲು ಶಾಪಿಂಗ್ ಹಾಕಿದ ಮಾಲ್ ಗಳು
 • ಬಂದ್ ಗೆ ಸರ್ಕಾರಿ ಸಾರಿಗೆ ಸಂಸ್ಥೆ ನೌಕರರು ಬೆಂಬಲ ವ್ಯಕ್ತಪಡಿಸಿರುವುದರಿಂದ ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ಥಬ್ದವಾಗಿದೆ. ಬಂದ್ ಹಿನ್ನಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಾರಸ್ಥರು ಬೆಂಬಲ ನೀಡಿದ್ದು, ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿ ಬಂದ್ ಗೆ ತಮ್ಮ ಬೆಂಬಲ ವ್ಯಕ್ಚಪಡಿಸಿದ್ದಾರೆ.  ಇನ್ನು ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಹೆದ್ದಾರಿ ತಡೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  [  ಇದನ್ನೂ ಓದಿ :  > ಬೆಂಗಳೂರನ್ನು”ಬಂದ್’ಳೂರು” ಎಂದು ವ್ಯಂಗ್ಯ ಮಾಡಿದ ಬಯೋಕಾನ್ ಮುಖ್ಯಸ್ಥೆ  ]
ಪೆಟ್ರೋಲ್ ಬ್ಯಾಂಕ್ ಬಂದ್
ಪೆಟ್ರೋಲ್ ಬಂಕ್ ಬಂದ್
 • ಉತ್ತರ ಕರ್ನಾಟಕದಲ್ಲೂ ‘ಕಾವೇರಿ’ದ ಹೋರಾಟ
  ಕನ್ನಡ ಪರ ಸಂಘಟನೆಗಳ ಹಾಗೂ ರೈತ ಪರ ಸಂಘಟನೆಗಳ ಕಾವೇರಿ ಪ್ರತಿಭಟನೆ ಇಡೀ ರಾಜ್ಯವನ್ನೇ ಸ್ಥಬ್ದಗೊಳಿಸಿದ್ದು, ಕಾವೇರಿಗಾಗಿ ಇದೀಗ ಉತ್ತರ ಕರ್ನಾಟಕ ಕೂಡ ಕೈ ಜೋಡಿಸಿದೆ. ಕಾವೇರಿ ನೀರಿಗಾಗಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಬಂದ್ ಗೆ ಉತ್ತರ ಕರ್ನಾಟಕದ ಬಹುತೇಕ ಕಡೆಗಳಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಬೆಳಗಾವಿ, ಗುಲ್ಬರ್ಗಾ, ವಿಜಯಪುರ, ಬಾಗಲಕೋಟೆ ಹಾಗೂ ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಬಂದ್ ಆಚರಣೆ ಮಾಡಲಾಗುತ್ತಿದೆ. ಪ್ರಮುಖ ಮಾರುಕಟ್ಟೆಗಳು ಬಹುತೇಕ ಸ್ಥಗಿತಗೊಂಡಿದ್ದು, ತುರ್ತು ಸೇವೆಗಳಾದ ಮೆಡಿಕಲ್ ಶಾಪ್, ಆಸ್ಪತ್ರೆಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ.ಇನ್ನು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಮಿಳುನಾಡು ಸರ್ಕಾರ ಹಾಗೂ ಸಿಎಂ ಜಯಲಲಿತಾ ಪ್ರತಿಕೃತಿ ಧಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರೆ, ಗುಲ್ಬರ್ಗಾ, ವಿಜಯಪುರದಲ್ಲಿ ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಬಳ್ಳಾರಿಯಲ್ಲಿ ಕನ್ನಡಪರ ಸಂಘಟನೆಗಳು ಟೈರ್ ಗೆ ಬೆಂಕಿ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿವೆ. ಅಂತೆಯೇ ಬಳ್ಳಾರಿಯ ಬೈಪಾಸ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ತಮಿಳುನಾಡು ರಾಜ್ಯದ ಲಾರಿಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದ್ದು, ಹಲವು ಲಾರಿಗಳು ಜಖಂಗೊಂಡಿವೆ, ಇನ್ನು ದಾವಣಗೆರೆಯಲ್ಲಿ ಕನ್ನಡಪರ ಸಂಘಟನೆಗಳು ವಿನೂತನವಾಗಿ ಪ್ರತಿಭಟನೆ ನಡೆಸಿದ್ದು, ತಲೆ ಮೇಲೆ ಕಲ್ಲು ಹೊತ್ತು ಸಾಗುವ ಮೂಲಕ ಕಾರ್ಯಕರ್ತರು ತಮಿಳುನಾಜು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಒಟ್ಟಾರೆ ಕಾವೇರಿಗಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ಮಂಡ್ಯ ಸಂಜಯ್ ಸರ್ಕಲ್ ನಲ್ಲಿ ಜಯಕರ್ನಾಟಕ ಕಾರ್ಯಕರ್ತರ ಪ್ರತಿಭಟನೆ
ಮಂಡ್ಯ ಸಂಜಯ್ ಸರ್ಕಲ್ ನಲ್ಲಿ ಜಯಕರ್ನಾಟಕ ಕಾರ್ಯಕರ್ತರ ಪ್ರತಿಭಟನೆ
 • ಚಿಪ್ಪು ನೀಡಿ ಪ್ರತಿಭಟನೆ

chippu
ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ, ಕನ್ನಡ ಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು, ಬಹುತೇಕ ಕಡೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಬೆಂಗಳೂರಿನಲ್ಲಿ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ವಾಹನಗಳ ಸವಾರರಿಗೆ ತೆಂಗಿನ ಚಿಪ್ಪು ನೀಡಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಕಾವೇರಿ ನದಿ ನೀರು ವಿಚಾರದಲ್ಲಿ ಕನ್ನಡಿಗರಿಗೆ ಚಿಪ್ಪೇ ಗತಿಯಾಗಿದೆ ಎಂದು ಹೇಳಿದ್ದಾರೆ. ಮಂಡ್ಯದ ಸಂಜಯ್ ವೃತ್ತದಲ್ಲಿ ಕರಾಟೆ ಪಟುಗಳು ಕರಾಟೆ ಪ್ರದರ್ಶನ ನೀಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಬಳ್ಳಾರಿ ಬೈಪಾಸ್ ರಸ್ತೆಯಲ್ಲಿ ಕೆಲವರು ಕಲ್ಲು ತೂರಾಟ ನಡೆಸಿದ್ದು, ತಮಿಳುನಾಡು ನೋಂದಣಿ ಸಂಖ್ಯೆ ಹೊಂದಿರುವ 3 ಲಾರಿಗಳಿಗೆ ಕಲ್ಲು ತೂರಿದ್ದಾರೆ.

 

 • ಮಂಡ್ಯದಲ್ಲಿ ತೀವ್ರಗೊಂಡ ಆಕ್ರೋಶ
  ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ, ಇಂದು ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಸೋಮವಾರದಿಂದಲೂ ಮಂಡ್ಯದಲ್ಲಿ ಕಾವೇರಿ ಹೋರಾಟದ ಕಾವು ಜೋರಾಗಿದ್ದು, ಸಂಜಯ್ ವೃತ್ತದಲ್ಲಿ ಬೆಳಿಗ್ಗೆಯಿಂದಲೇ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗಿದೆ. ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಖಾಲಿ ಕೊಡಗಳನ್ನು ರಸ್ತೆಗೆ ಉರುಳಿಸುವ ಮೂಲಕ, ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಮಗೇ ಕುಡಿಯಲು ನೀರಿಲ್ಲ. ತಮಿಳುನಾಡಿಗೆ ನೀರು ಬಿಡಬೇಡಿ ಎಂದು ಆಗ್ರಹಿಸಿದ್ದಾರೆ.
  ಕನ್ನಡ ಸಂಘಟನೆಯ ಕಾರ್ಯಕರ್ತರೊಬ್ಬರು, ಕೈ ಕೊಯ್ದುಕೊಂಡು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನದಿ ನೀರು ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.

 

Facebook Comments

Sri Raghav

Admin