ಕಾವೇರಿ ಕಿಚ್ಚು : ತಮಿಳುನಾಡಿಗೆ ಹೋಗುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಮೇಲೆ ಕಲ್ಲು ತೂರಾಟ

ಈ ಸುದ್ದಿಯನ್ನು ಶೇರ್ ಮಾಡಿ

Broke

ಬೆಂಗಳೂರು, ಸೆ.10– ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ವಿರೋಧಿಸಿ ನಿನ್ನೆ ನಡೆದ ಕರ್ನಾಟಕ ಬಂದ್ ನಂತರ ಕರ್ನಾಟಕದಿಂದ ತಮಿಳುನಾಡಿನ ಕೊಯಮುತ್ತೂರಿಗೆ ತೆರಳುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಚಾಮರಾಜನಗರದಿಂದ ಸತ್ತಿ ಮಾರ್ಗವಾಗಿ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿಯ ಕೆಎ-10 ಎಫ್ 1280 ನೋಂದಣಿ ಸಂಖ್ಯೆಯ ಬಸ್ ಮೇಲೆ ಕಲ್ಲು ತೂರಲಾಗಿದೆ. ಧರ್ಮಪುರಿ ಬಳಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ ಎನ್ನಲಾಗಿದ್ದು, ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂದ್ ಬೆನ್ನಲ್ಲೆ ತಮಿಳುನಾಡಿನಲ್ಲಿ ಕರ್ನಾಟಕದ ಬಸ್ ಮೇಲೆ ಕಲ್ಲು ತೂರಿದ್ದು ಆತಂಕಕಾರಿ ಬೆಳವಣಿಗೆಯಾಗಿದ್ದು, ಕನ್ನಡ ಪರ ಸಂಘಟನೆಗಳು ಮತ್ತೆ ರಸ್ತೆಗಿಳಿದು ಹೋರಾಟ ನಡೆಸುವ ಸಾಧ್ಯತೆ ಇದೆ.

► Follow us on –  Facebook / Twitter  / Google+

Facebook Comments

Sri Raghav

Admin