ಕಾವೇರಿ ಕೊಳ್ಳದ ಜಲಾಶಯಗಳಿಗೆ ಮತ್ತಷ್ಟು ಬಿಗಿಭದ್ರತೆ

ಈ ಸುದ್ದಿಯನ್ನು ಶೇರ್ ಮಾಡಿ

kaveri

ಎಚ್.ಡಿ.ಕೋಟೆ,ಸೆ.14-ಸುಪ್ರೀಂಕೋರ್ಟ್ ತೀರ್ಪು ಹಾಗೂ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ಖಂಡಿಸಿ ರಾಜಧಾನಿ ಬೆಂಗಳೂರು, ಮಂಡ್ಯ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಕನ್ನಡಪರ ಸಂಘಟನೆಗಳು ರೊಚ್ಚಿಗೆದ್ದು ತೀವ್ರ ಪ್ರತಿಭಟನೆ ಹಿನ್ನೆಲೆಯಲ್ಲಿ ಮೈಸೂರು ಕೊಳ್ಳದ ಜಲಾಶಯಗಳಲ್ಲಿ ಮತ್ತಷ್ಟು ಬಿಗಿಭದ್ರತೆ ಕೈಗೊಳ್ಳಲಾಗಿದೆ.  ಡಿಐಜಿ ವಿಪುಲ್ ಕುಮಾರ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಆಯುಕ್ತ ಕಲಾಕೃಷ್ಣಸ್ವಾಮಿ ಸೇರಿದಂತೆ ಆರ್‌ಎಎಫ್ ಸಿಬ್ಬಂದಿ, ಗನ್‌ಮಾನ್‌ಗಳು, 500ಕ್ಕೂ ಹೆಚ್ಚು ಪೊಲೀಸರು ಇದೇ ತಿಂಗಳು 22ವರೆಗೂ ನಿಷೇಧಾಜ್ಞೆ ಜಾರಿಯೊಂದಿಗೆ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ನಿನ್ನೆ ಸುಮಾರು 25ಕ್ಕೂ ಹೆಚ್ಚು ಪ್ರತಿಭಟ ನೆಕಾರರು ಕಬನಿ ಜಲಾಶಯದ ಕಡೆಗೆ ನಗ್ಗಲು ಯತ್ನಿಸಿದಾಗ ಹೆಚ್.ಡಿ.ಕೋಟೆಯ ಸರ್ಕಲ್ ಇನ್‌ಸ್ಪೆಕ್ಟರ್ ಹರೀಶ್, ಬೀಚನಹಳ್ಳಿ ಸಬ್‌ಇನ್‌ಸ್ಪೆಕ್ಟರ್ ಸುರೇಶ್, ಇನ್‌ಸ್ಪೆಕ್ಟರ್ ಅಶೋಕ್ ನೇತೃತ್ವದ ತಂಡ ಪ್ರತಿಭಟನಾಕಾರರನ್ನು ತಡೆದು ಮನವೊಲಿಸಿದರು.  ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಬನಿ ಜಲಾಶಯಗಳಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin