ಕಾವೇರಿ ಗಲಾಟೆ ವೇಳೆ ಕೆಪಿಎನ್ ಬಸ್‍ಗಳಿಗೆ ಬೆಂಕಿ ಬಿದ್ದ ಪ್ರಕರಣ ಸಿಐಡಿಗೆ ವರ್ಗಾವಣೆ ?

ಈ ಸುದ್ದಿಯನ್ನು ಶೇರ್ ಮಾಡಿ

KPN

ಬೆಂಗಳೂರು, ಸೆ.17- ಕೆಪಿಎನ್ ಬಸ್‍ಗಳಿಗೆ ಬೆಂಕಿ ಹಚ್ಚಿದ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವರ್ಗಾಯಿಸುವ ಸಾಧ್ಯತೆ ಇದೆ. ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ನಂತರ ನಗರದಲ್ಲಿ ನಡೆದಿದ್ದ ಪ್ರತಿಭಟನೆಗಳ ನಡುವೆ ನೈಸ್ ರಸ್ತೆ ಬಳಿಯ ಡಿಸೋಜಾನಗರ ಬಳಿ ಕೆಪಿಎನ್ ಸಂಸ್ಥೆಗೆ ಸೇರಿದ 40 ಬಸ್‍ಗಳಿಗೆ ಬೆಂಕಿ ಬಿದ್ದಿತ್ತು.  ಕೆಲ ಹೋರಾಟಗಾರರು, ಮುಖಂಡರ ಕೈವಾಡ ಹಾಗೂ ವಿಮೆಗಾಗಿ ಬೆಂಕಿ ಹಚ್ಚಿರುವ ಶಂಕೆ ಸೇರಿದಂತೆ ಹಲವು ಅನುಮಾನಗಳು ಎದ್ದ ಹಿನ್ನೆಲೆಯಲ್ಲಿ ಪ್ರಸ್ತುತ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಸರ್ಕಾರ ಸಿಐಡಿ ತನಿಖೆಗೆ ವಹಿಸಲು ಮುಂದಾಗಿದೆ. ಈಗಾಗಲೇ ರಾಜರಾಜೇಶ್ವರಿನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಒಬ್ಬ ಮಹಿಳೆ ಸೇರಿದಂತೆ 11 ಮಂದಿಯನ್ನು ಬಂಧಿಸಲಾಗಿದೆ.

Facebook Comments

Sri Raghav

Admin