ಕಾವೇರಿ ಚಳವಳಿಗಾರರ ಬಿಡುಗಡೆಗೆ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

Kaveri-0002

ಪಾಂಡವಪುರ, ಅ.21- ಪಟ್ಟಣ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಅಯ್ಯನಗೌಡ ಅವರ ವಜಾಕ್ಕೆ ಆಗ್ರಹಿಸಿ ಬಿಜೆಪಿ ವತಿಯಿಂದ ಶೀಘ್ರವೇ ಅಯ್ಯನಗೌಡ ಹಠಾವೋ ಪಾಂಡವಪುರ ಬಜಾವೋ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಬಿಜೆಪಿ ರೈತಮೋರ್ಚಾದ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜುನಾಥ್ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಸೆ.12ರಂದು ಪಾಂಡವಪುರದಲ್ಲಿ ನಡೆದ ಕಾವೇರಿ ಗಲಭೆಗೆ ಸಂಬಂಧಿಸಿದಂತೆ ಸಬ್ ಇನ್ಸ್‍ಪೆಕ್ಟರ್ ಅಯ್ಯನಗೌಡ ಗಲಾಟೆಯಲ್ಲಿ ಭಾಗವಹಿಸಿದ್ದವರನ್ನು ಬಂಧಿಸುವ ಬದಲಿಗೆ ಕಾವೇರಿ ಚಳವಳಿಯಲ್ಲಿ ಭಾಗವಹಿಸಿದ್ದ ಅಮಾಯಕರನ್ನು ಬಂಧಿಸಿದ್ದಾರೆ. ಹೀಗಾಗಿ ಬಿಜೆಪಿ ರಾಜ್ಯ ನಾಯಕರ ನೇತೃತ್ವದಲ್ಲಿ ಶೀಘ್ರವೇ ಅಯ್ಯನಗೌಡ ವಿರುದ್ಧ ಪ್ರತಿಭಟನಾ ಕಾರ್ಯಕ್ರಮ ನಡೆಸಲಾಗುವುದು ಎಂದರು.
ಸುಮಾರು 80ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿರುವ ಪೊಲೀಸರು ಚಳವಳಿಗಾರರ ಮೇಲೆ 307 ಸೇರಿದಂತೆ ಏಳೆಂಟು ಕೇಸುಗಳನ್ನು ದಾಖಲಿಸಿದ್ದಾರೆ. ಈ ಕೂಡಲೇ ಬಂಧಿತರನ್ನು ಬಿಡುಗಡೆಗೊಳಿಸಬೇಕು ಎಂದು ಅವರು ಆಗ್ರಹಿಸಿದರು.ನೀಲನಹಳ್ಳಿ ಧನಂಜಯ, ಶ್ರೀನಿವಾಸನಾಯಕ, ಉದಯ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin