ಕಾವೇರಿ ನಿರ್ವಹಣಾ ಮಂಡಳಿ ರಚನೆಗಾಗಿ ತಮಿಳುನಾಡು ಬಂದ್

ಈ ಸುದ್ದಿಯನ್ನು ಶೇರ್ ಮಾಡಿ

Taminadu-bandh

ಚೆನ್ನೈ, ಏ.5-ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಆಗ್ರಹಿಸಿ ಡಿಎಂಕೆ ನೇತೃತ್ವದ ವಿರೋಧ ಪಕ್ಷಗಳು ಇಂದು ತಮಿಳುನಾಡು ಬಂದ್ ಆಚರಿಸಿದವು. ರಾಜಧಾನಿ ಚೆನ್ನೈ, ಹಾಗೂ ಕಾವೇರಿ ನದಿ ಪಾತ್ರದ ತಿರುಚಿರಾಪಳ್ಳಿ ಮತ್ತು ತಂಜಾವೂರ್ ಸೇರಿದಂತೆ ರಾಜ್ಯಾದ್ಯಂತ ಬಂದ್ ಆಚರಿಸಲಾಗಿದೆ. ತಮಿಳುನಾಡು ಬಂದ್ ಪ್ರಯುಕ್ತ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಸಂಕೀರ್ಣಗಳು ಹಾಗೂ ಮಾರುಕಟ್ಟೆಗಳು ಮುಚ್ಚಿದ್ದವು. ಬ್ಯಾಂಕುಗಳು, ಔಷಧ ಅಂಗಡಿಗಳು, ಆಸ್ಪತ್ರೆಗಳು ಹಾಗೂ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿದ್ದವು. ವಾಹನ ಸಂಚಾರ ವಿರಳವಾಗಿತ್ತು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin