ಕಾವೇರಿ ಮುಂದಿನ ಹೋರಾಟಕ್ಕೆ ಜಿ.ಮಾದೇಗೌಡ ನೇತೃತ್ವದಲ್ಲಿ ರೂಪುರೇಷೆ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

Supreme
ಮಂಡ್ಯ, ಅ.20- ಕಾವೇರಿ ನ್ಯಾಯಾಧಿಕರಣದ ಐತೀರ್ಪನ್ನು ಕಾಯ್ದಿರಿಸಿರುವ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಮುಂದಿನ ಆದೇಶದವರೆಗೆ ತಮಿಳುನಾಡಿಗೆ 2ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶಿಸಿರುವ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ರೂಪುರೇಷೆ ಕುರಿತು ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ನೇತೃತ್ವದಲ್ಲಿ ಜಿಲ್ಲೆಯ ಸರ್ವ ಪಕ್ಷ ಸಭೆ ನಡೆಯುತ್ತಿದೆ.ನಗರದ ಪ್ರವಾಸಿ ಮಂದಿರದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಂಸದ ಪುಟ್ಟರಾಜು ಪಾಲ್ಗೊಂಡಿದ್ದಾರೆ. ಬಹುತೇಕ ಜನಪ್ರತಿನಿಧಿಗಳು ಗೈರಾಗಿದ್ದರು. ವಿವಿಧ ಪಕ್ಷಗಳ ಜಿಲ್ಲಾಧ್ಯಕ್ಷರು ಮತ್ತು ವಿವಿಧ ಸಂಘಟನೆಗಳ ಪ್ರಮುಖರು ಭಾಗಿಯಾಗಿದ್ದಾರೆ.ಕೆಆರ್‍ಎಸ್‍ನಲ್ಲಿ ನೀರೇ ಇಲ್ಲದಿದ್ದರೂ ಸುಪ್ರೀಂಕೋರ್ಟ್‍ನಿಂದ ಪದೇ ಪದೇ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ಬರುತ್ತಿರುವುದರಿಂದ ತೀವ್ರ ಆಕ್ರೋಶಗೊಂಡಿರುವ ರೈತರು ಹಾಗೂ ಹೋರಾಟಗಾರರು ಮತ್ತೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin