ಕಾಶ್ಮೀರದಲ್ಲಿ ನಿಲ್ಲದ ಹಿಂಸಾಚಾರ : ಸತ್ತವರ ಸಂಖ್ಯೆ 73ಕ್ಕೆ ಏರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Kashmir

ಶ್ರೀನಗರ, ಸೆ.6- ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಪ್ರತಿಭಟನಾಕಾರರ ಮತ್ತು ಭದ್ರತಾಪಡೆಗಳ ನಡುವೆ ಇಂದು ನಡೆದ ಘರ್ಷಣೆಯಲ್ಲಿ ಓರ್ವ ಯುವಕ ಮೃತಪಟ್ಟು, ಅನೇಕರು ಗಾಯಗೊಂಡಿದ್ದಾರೆ. ಇದರೊಂದಿಗೆ ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ 73ಕ್ಕೆ ಏರಿದೆ. ದಕ್ಷಿಣ ಕಾಶ್ಮೀರದ ಸೀರ್ ಹಮ್‍ದನ್ ಪ್ರದೇಶದಲ್ಲಿ ಹಿಂಸಾಚಾರಲ್ಲಿ ತೊಡಗಿದ್ದ ದೊಡ್ಡ ಗುಂಪನ್ನು ಹಿಮ್ಮೆಟ್ಟಿಸಲು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಸೀರ್ ಅಹಮದ್ ಮೀಲ್ ಎಂಬ ಯುವಕ ಸಾವಿಗೀಡಾಗಿದ್ದಾನೆ. ಈ ಘಟನೆಯಲ್ಲಿ ಓರ್ವ ಮಹಿಳೆ ಸಹಿತ ಅನೇಕರು ಗಾಯಗೊಂಡಿದ್ದಾರೆ.

ನಿನ್ನೆ ಸೊಪೋರ್ ಪ್ರದೇಶದಲ್ಲಿ ಘರ್ಷಣೆಗೆ ಇನ್ನೊಬ್ಬ ಯುವಕ ಬಲಿಯಾಗಿದ್ದು, ಈ ಘರ್ಷಣೆಗಳಲ್ಲಿ ಒಟ್ಟು 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.  ಈ ಮಧ್ಯೆ ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆ ಯತ್ನವಾಗಿ ಎರಡು ದಿನಗಳ ಭೇಟಿ ಪೂರೈಸಿ ಹಿಂದಿರುಗಿರುವ ಸರ್ವಪಕ್ಷ ನಿಯೋಗದ ನೇತೃತ್ವ ವಹಿಸಿದ್ದ ಗೃಹಸಚಿವ ರಾಜನಾಥ್ ಸಿಂಗ್ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಪರಿಸ್ಥಿತಿಯ ಬಗ್ಗೆ ವಿವರಿಸಿದರು.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin