ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತಕ್ಕೆ ಫಾರೂಕ್ ಅಬ್ದುಲ್ಲಾ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

Farooq-Abdullah

ಶ್ರೀನಗರ, ಮೇ 29-ಹಿಂಸಾಚಾರದಿಂದ ತತ್ತರಿಸಿರುವ ಕಾಶ್ಮೀರವನ್ನು ರಕ್ಷಿಸಲು ತಕ್ಷಣ ರಾಜ್ಯಪಾಲರ ಆಡಳಿತ ಜಾ ಜಾರಿಗೊಳಿಸಬೇಕೆಂದು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರದ ಮಾಜಿ ಸಚಿವ ಡಾ. ಫಾರೂಕ್ ಅಬ್ದುಲ್ಲಾ ಆಗ್ರಹಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ತಾವು ಎಂದಿಗೂ ರಾಜ್ಯಪಾಲರ ಆಡಳಿತವನ್ನು ಬಯಸಿಲ್ಲ. ಆದರೆ, ಪರಿಸ್ಥಿತಿ ಬಿಗಡಾಯಿಸಿದ್ದು, ರಾಜ್ಯಪಾಲರ ಆಳ್ವಿಕೆ ಜಾರಿಗೊಳಿಸದೇ ಈಗ ಅನ್ಯಮಾರ್ಗವಿಲ್ಲ.



ಮುಫ್ತಿ ಮೆಹಬೂಬಾ ಸರ್ಕಾರ ಎಲ್ಲ ಕ್ಷೇತ್ರಗಳಲ್ಲೂ ಸಂಪೂರ್ಣ ವಿಫಲವಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಇಡೀ ಕಾಶ್ಮೀರ ಕಣಿವೆ ಹಿಂಸಾಚಾರ ಮತ್ತು ಭಯೋತ್ಪಾದಕರ ಆಕ್ರಮಣದಿಂದ ಪ್ರಕ್ಷುಬ್ಧಗೊಂಡಿದೆ. ಇದು ದೇಶದ ಇತರೆಡೆ ಕೋಮುಗಲಭೆಗೂ ಕಾರಣವಾಗಲಿದೆ. ಆದ್ದರಿಂದ ಈ ಸಮಸ್ಯೆಗೆ ಶೀಘ್ರ ಪರಿಹಾರೋಪಾಯಗಳನ್ನು ರೂಪಿಸಬೇಕಿದೆ ಎಂದು ಅವರು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin