ಕಾಶ್ಮೀರದಲ್ಲಿ ಹಿಂಸಾಚಾರ ತಡೆಯುವಂತೆ ಪ್ರಧಾನಿಗೆ ಓಮರ್ ಅಬ್ದುಲ್ಲ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

PM-Modi-022

ನವದೆಹಲಿ,ಆ.22- ಕಾಶ್ಮೀರದಲ್ಲಿ ನೆಲೆಸಿರುವ ಅಶಾಂತಿ ಮತ್ತು ಉಲ್ಬಣಗೊಂಡಿರುವ ಹಿಂಸಾಚಾರವನ್ನು ಕೊನೆಗಾಣಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲ ನೇತೃತ್ವದ ವಿರೋಧ ಪಕ್ಷದ ನಿಯೋಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದೆ. ರಾಜಧಾನಿಯಲ್ಲಿ ಇಂದು ಪ್ರಧಾನಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಜಮ್ಮು ಮತ್ತು ಕಾಶ್ಮೀರ ಪ್ರತಿಪಕ್ಷಗಳ ಜಂಟಿ ನಿಯೋಗವು ಹಿಂಸಾಚಾರವನ್ನು ಕೊನೆಗಾಣಿಸಲು ರಾಜಕೀಯ ಕ್ರಮಗಳನ್ನು ಅನುಸರಿಸಬೇಕು ಎಂದು ಕೋರಿದೆ.
ಕಾಶ್ಮೀರ ಕಣಿವೆಯಲ್ಲಿ ಕಳೆದ 45 ದಿನಗಳಿಂದ ಹಿಸಾಚಾರ ಪರಿಸ್ಥಿತಿ ತಲೆದೋರಿದೆ. ಸಾವು-ನೋವು ಸಂಭವಿಸಿದ್ದು, ಅಲ್ಲಿನ ಜನ ಆತಂಕಗೊಂಡಿದ್ದಾರೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಬೇಕೆಂದು ಓಮರ್ ಅಬ್ದುಲ್ಲಾ ನೇತೃತ್ವದ ನಿಯೋಗವು ಮನವಿ ಮಾಡಿದೆ.

ಕಾಶ್ಮೀರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ನಿರಂತರ ವಿಫಲತೆಯಿಂದಾಗಿ ಅಲ್ಲಿನ ಜನರು, ಅದರಲ್ಲೂ ವಿಶೇಷವಾಗಿ ಯುವಕರು ಅತೃಪ್ತರಾಗಿದ್ದು, ಅಲ್ಲಿನ ಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಆದ್ದರಿಂದ ಪ್ರಧಾನಮಂತ್ರಿಯವರು ಹಿಂಸಾಚಾರ ಕೊನೆಗಾಣಿಸಿ ಶಾಂತ ಸ್ಥಿತಿ ನೆಲೆಗೊಳ್ಳಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಾಶ್ಮೀರ ಪತ್ರಿಪಕ್ಷಗಳ ನಾಯಕರು ಒತ್ತಾಯಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin