ಕಾಶ್ಮೀರದಲ್ಲಿ ಹಿಂಸೆಗೆ ಕುಮ್ಮಕ್ಕು ನೀಡುವರನ್ನು ಮಟ್ಟ ಹಾಕಿ : ರಾಜನಾಥ್ ಸಿಂಗ್ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

S Rajanath-Singh

ನವದೆಹಲಿ, ಸೆ. 12-ಕಾಶ್ಮೀರದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವವರನ್ನು ಮಟ್ಟ ಹಾಕಿ ಇನ್ನೊಂದು ವಾರದೊಳಗೆ ಕಣಿವೆ ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೇನಾಪಡೆಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ದೋವಲ್ ಒಳಗೊಂಡಂತೆ ಹಿರಿಯ ಭದ್ರತಾ ಅಧಿಕಾರಿಗಳ ಜೊತೆ ಒಂದು ತಾಸು ಸುದೀರ್ಘ ಸಮಾಲೋಚನೆ ನಡೆದ ರಾಜನಾಥ್ ಸಿಂಗ್ ಈ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.  ಕಾಶ್ಮೀರ ಕಣಿವೆಯಲ್ಲಿ ಯುವಕರಿಗೆ ಪ್ರಚೋದನೆ ನೀಡಿ ಹಿಂಸಾಚಾರಕ್ಕೆ ಪ್ರಚೋಚನೆ ನೀಡುತ್ತಿರುವ ಶಕ್ತಿಗಳನ್ನು ಮಟ್ಟ ಹಾಕಬೇಕು ಹಾಗೂ ಇನ್ನೊಂದು ವಾರದೊಳಗೆ ಅಲ್ಲಿ ಶಾಂತಿ ಸ್ಥಾಪನೆಯಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಅವರು ಉನ್ನತಾಧಿಕಾರಿಗಳಿಗೆ ಸ್ಟಷ್ಟ ಸೂಚನೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಈ ಮಧ್ಯೆ ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರ ವಿರುದ್ಧ ಮುಂದುವರಿದ ಸೇನಾ ಕಾರ್ಯಾಚರಣೆಯಲ್ಲಿ ಇಂದು ಬೆಳಿಗ್ಗೆ ಮತ್ತೊಬ್ಬ ಉಗ್ರ ಹತನಾಗಿದ್ದಾನೆ. ಉಗ್ರರಿಗಾಗಿ ಈ ಪ್ರದೇಶದಲ್ಲಿ ವ್ಯಾಪಕ ಶೋಧ ಮುಂದುವರೆದಿದೆ.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin