ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿ ಎನ್‍ಕೌಂಟರ್’ಗೆ ಇಬ್ಬರು ಉಗ್ರರು ಖತಂ

ಈ ಸುದ್ದಿಯನ್ನು ಶೇರ್ ಮಾಡಿ

Firing--041

ಶ್ರೀನಗರ, ಮಾ.24-ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭಯೋತ್ಪಾದಕರ ನಿಗ್ರಹ ಕಾರ್ಯಾಚರಣೆ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಯೊಂದಿಗೆ ಇಂದು ಮುಂಜಾನೆ ನಡೆದ ಎನ್‍ಕೌಂಟರ್‍ನಲ್ಲಿ ಇಬ್ಬರು ಉಗ್ರಗಾಮಿಗಳು ಹತರಾಗಿದ್ದಾರೆ. ಅನಂತನಾಗ್ ಜಿಲ್ಲೆಯ ದೂರು ಪ್ರದೇಶದಲ್ಲಿ ಉಗ್ರರು ನುಸುಳಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಯೋಧರು ಆ ಪ್ರದೇಶದಲ್ಲಿ ನಿನ್ನೆ ರಾತ್ರಿಯಿಂದಲೇ ಶೋಧ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಉಗ್ರರು ಗುಂಡು ಹಾರಿಸಿದಾಗ ಎನ್‍ಕೌಂಟರ್ ನಡೆಯಿತು. ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.  ಮೊನ್ನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ 48 ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಉಗ್ರರು ಹತರಾಗಿ, ಅಷ್ಟೇ ಸಂಖ್ಯೆಯ ಯೋಧರು ಹುತಾತ್ಮರಾದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin