ಕಾಶ್ಮೀರದ ದಕ್ಷಿಣ ಭಾಗದಲ್ಲಿ ಉಗ್ರರ ದಾಳಿ : ಓರ್ವ ಪೊಲೀಸ್ ಸೇರಿ ಇಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Kashmir

ಶ್ರೀನಗರ,ಆ.13-ಹಿಂಸಾಚಾರ ಪೀಡಿತ ಕಾಶ್ಮೀರದ ದಕ್ಷಿಣ ಭಾಗದಲ್ಲಿ  ನಿನ್ನೆ ರಾತ್ರಿ ಉಗ್ರರು ಓರ್ವ ಪೊಲೀಸ್ ಪೇದೆ ಮತ್ತು ಒಬ್ಬ ನಾಗರಿಕನನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಈ ದಾಳಿಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ.   ದಕ್ಷಿಣ ಕಾಶ್ಮೀರದ ಕುಲ್ಗಂ ಜಿಲ್ಲೆಯ ಚಾನ್ಸೆರ್ನಲ್ಲಿ ಉಗ್ರರು ಗುಂಡು ಹಾರಿಸಿ  ಮನಜೂರ್ ಅಹಮದ್ ಎಂಬ ಪೊಲೀಸ್ ಪೇದೆಯನ್ನು ಕೊಂದಿದ್ದಾರೆ. ಈ ಘಟನೆಯಲ್ಲಿ ಫಾರುಕ್ ಅಹಮದ್ ಎಂಬ ನಾಗರಿಕ ಕೂಡ ಗುಂಡೇಟಿಗೆ ಹತನಾಗಿನಾಗಿದ್ದಾನೆ.    ಇಬ್ಬರು ಗಾಯಾಳುಗಳು ಶ್ರೀನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ  ಪಡೆಯುತ್ತಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ.
ಅಂಗಡಿ ಮುಂದೆ ಕುಳಿತಿದ್ದ ಪೊಲೀಸರ ಮತ್ತು ನಾಗರಿಕರ ಮೇಲೆ ಬಂದೂಕುಧಾರಿಗಳು ಗುಂಡು ಹಾರಿಸಿ ಪರಾರಿಯಾದರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.   ಉಗ್ರರಿಗಾಗಿ ಸೇನಾಪಡೆ ಮತ್ತು ಪೊಲೀಸ್ ಸಿಬ್ಬಂದಿ ವ್ಯಾಪಕ ಶೋಧ ನಡೆಸುತ್ತಿದೆ.  ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಜಮ್ಮು ಮತ್ತು ಕಾಶ್ಮೀರದ ಅವಿಭಾಜ್ಯ ಅಂಗವೆಂದು ನಿನ್ನೆ ನಡೆದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪುನರುಚ್ಚರಿಸಿದ ಬೆನ್ನಲ್ಲೇ, ಕಾಶ್ಮೀರ ಕಣಿವೆಯಲ್ಲಿ ಉಗ್ರರ ಅಟ್ಟಹಾಸ ಮರುಕಳಿಸಿದೆ.   ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವ ಕುರಿತು ನಿನ್ನೆ ಲೋಕಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿತ್ತು.

► Follow us on –  Facebook / Twitter  / Google+

Facebook Comments

Sri Raghav

Admin