ಕಾಶ್ಮೀರದ ಸೋಪೋರ್‍ನ ಮನೆಯೊಂದರಲ್ಲಿ ಎನ್‍ಕೌಂಟರ್ : ಇಬ್ಬರು ಉಗ್ರರು ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

Encounter--01

ಶ್ರೀನಗರ, ಜೂ. 1-ಕಾಶ್ಮೀರ ಕಣಿವೆಯಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಹವಣಿಸುತ್ತಿರುವ ಉಗ್ರರ ಕುತಂತ್ರಗಳನ್ನು ಭಾರತೀಯ ಸೇನಾ ಪಡೆಗಳು ಯಶಸ್ವಿಯಾಗಿ ವಿಫಲಗೊಳಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್‍ನ ಮನೆಯೊಂದರಲ್ಲಿ ಅವಿತಿಟ್ಟುಕೊಂಡಿದ್ದ ಇಬ್ಬರು ಭಯೋತ್ಪಾದಕರನ್ನು ಯೋಧರು ಹೊಡೆದುರುಳಿಸಿದ್ದಾರೆ. ಈ ಪ್ರದೇಶದಲ್ಲಿ ಇರಬಹುದಾಗ ಮತ್ತಷ್ಟು ಉಗ್ರಗಾಮಿಗಳನ್ನು ಸದೆ ಬಡಿಯಲು ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.ಪಾಕಿಸ್ತಾನ ಬೆಂಬಲಿತ ಉಗ್ರರು ಇರುವ ಬಗ್ಗೆ ದೊರೆತ ಖಚಿತ ಸುಳುವಿನ ಮೇರೆಗೆ ಭದ್ರತಾ ಪಡೆಗಳು ಇಂದು ಮುಂಜಾನೆ 3.30ರಲ್ಲಿ ಸೋಪೋರ್‍ನ ನಾಟಿಪೋಟಾ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಮನೆಯೊಂದರಲ್ಲಿ ಬಚ್ಚಿಟ್ಟುಕೊಂಡಿದ್ದ ಉಗ್ರರು ಯೋಧರತ್ತ ಗುಂಡು ಹಾರಿಸಿದರು. ಯೋಧರು ಪ್ರತಿದಾಳಿ ನಡೆಸಿದಾಗ ಕೆಲಕಾಲ ಗುಂಡಿನ ಚಕಮಕಿ ನಡೆಯಿತು. ಇಬ್ಬರು ಉಗ್ರರನ್ನು ಎನ್‍ಕೌಂಟರ್‍ನಲ್ಲಿ ಹತರಾದರು. ಮೃತರಿಂದ ಬಂದೂಕುಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin