ಕಾಶ್ಮೀರದ ಹಿತಾಸಕ್ತಿ ರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ : ಪ್ರಧಾನಿ

ಈ ಸುದ್ದಿಯನ್ನು ಶೇರ್ ಮಾಡಿ

modi

ನವದೆಹಲಿ, ಏ.24-ಹಿಂಸಾಚಾರ ಪೀಡಿತ ಕಾಶ್ಮೀರ ಜನತೆಯ ಹರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಇಂದು ದೆಹಲಿಯಲ್ಲಿ ಪ್ರಧಾನಿಯವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಇತ್ತೀಚೆಗೆ ಉಲ್ಬಣಗೊಂಡಿರುವ ಹಿಂಸಾಚಾರ ಘಟನೆಗಳು ಮತ್ತು ಪ್ರಸ್ತುತ ಸನ್ನಿವೇಶಗಳ ಬಗ್ಗೆ ವಿವರಿಸಿದರು. ಪರಿಸ್ಥಿತಿಯನ್ನು ತಿಳಿಗೊಳಿಸಲು ಹುರಿಯತ್ ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ಸೇರಿದಂತೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ಮೆಹಬೂಬಾ ಮನವಿ ಮಾಡಿದರು.



ಅಲ್ಲಿನ ಪರಿಸ್ಥಿತಿಯ ವಿವರಗಳನ್ನು ಪಡೆದ ಪ್ರಧಾನಿ, ಕಾಶ್ಮೀರ ಜನರ ಹಿತಾಸಕ್ತಿ ರಕ್ಷಣೆಗೆ ಸರ್ಕಾರ ಸಕಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಆಶ್ವಾಸನೆ ನೀಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin