ಕಾಶ್ಮೀರ ವಿಷಯ : ಭಾರತ-ಪಾಕ್ ಚರ್ಚೆಗೆ ಅಮೆರಿಕ ಒಲವು

ಈ ಸುದ್ದಿಯನ್ನು ಶೇರ್ ಮಾಡಿ

Indi9a

ವಾಷಿಂಗ್ಟನ್, ಆ.16– ಭಾರತ ಮತ್ತು ಪಾಕಿಸ್ತಾನ ಸಂಬಂಧ ಸುಧಾರಣೆಗೆ ಯಾವುದೇ ಮತ್ತು ಎಲ್ಲ ಸಕಾರಾತ್ಮಕ ಕ್ರಮಗಳಿಗೆ ತಾನು ಬೆಂಬಲ ನೀಡುವುದಾಗಿ ಅಮೆರಿಕ ಪುನರುಚ್ಚರಿಸಿದೆ. ಕಾಶ್ಮೀರ ವಿಷಯದಲ್ಲಿ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ, ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ವಾಕ್ಸಮರದ ಬಗ್ಗೆ ನಾವು ಪ್ರಸ್ತಾಪಿಸಲು ಇಚ್ಛಿಸುವುದಿಲ್ಲ. ಉಭಯ ದೇಶಗಳು ಕಾಶ್ಮೀರ ಕುರಿತ ಯಾವುದೇ ಚರ್ಚೆಯ ವ್ಯಾಪ್ತಿ ಮತ್ತು ಮಹತ್ವವನ್ನು ಮನಗಾಣಬೇಕು ಎಂದು ವಿದೇಶಾಂಗ ಸಚಿವಾಲಯದ ವಕ್ತಾರರಾದ ಎಲಿಜಬೆತ್ ಟ್ರುಡಿಯು ಹೇಳಿದ್ದಾರೆ.  ಕಾಶ್ಮೀರ ಕಣಿವೆಯಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಕುರಿತು ಪ್ರಸ್ತಾಪಿಸಿದ ಅವರು, ಶಾಂತಿಯುತ ಪರಿಹಾರ ಕಂಡುಕೊಳ್ಳಲು ಎಲ್ಲ ರೀತಿಯಲ್ಲಿ ನಡೆಯುವ ಪ್ರಯತ್ನಗಳಿಗೆ ಅಮೆರಿಕ ಬೆಂಬಲ ನೀಡಲಿದೆ ಎಂದರು.

► Follow us on –  Facebook / Twitter  / Google+

Facebook Comments

Sri Raghav

Admin