ಕಾಶ್ಮೀರ ಸಮಸ್ಯೆ ಇತ್ಯರ್ಥಕ್ಕೆ ಪಾಕ್, ಭಾರತಕ್ಕೆ ಬಾನ್ ಕಿ ಮೂನ್ ಸಲಹೆ

ಈ ಸುದ್ದಿಯನ್ನು ಶೇರ್ ಮಾಡಿ

an-ki-mon

ವಿಶ್ವಸಂಸ್ಥೆ, ಸೆ. 22-ಕಾಶ್ಮೀರ ಸೇರಿದಂತೆ ಬಾಕಿ ಉಳಿದಿರುವ ವಿವಾದಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ವಿಶ್ವಸಂಸ್ಥೆ ಮಹಾ ಪ್ರಧಾನಕಾರ್ಯದರ್ಶಿ ಬಾನ್ ಕಿ ಮೂನ್ ಪಾಕಿಸ್ತಾನ ಮತ್ತು ಭಾರತಕ್ಕೆ ಸಲಹೆ ಮಾಡಿದ್ದಾರೆ. ಕಾಶ್ಮೀರ ವಿವಾದ ಇತ್ಯರ್ಥಗೊಳಿಸುವ ಸಂಬಂಧ ಪಾಕಿಸ್ತಾನದ ಪುನರಾವರ್ತಿತ ಮನವಿಗಳನ್ನು ತಳ್ಳಿ ಹಾಕಿದ ಅವರು, ಈ ಎರಡೂ ದೇಶಗಳು ಪರಸ್ಪರ ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ಪಾಕ್ ಪ್ರಧಾನಿ ನವಾಜ್ ಷರೀಫ್‍ಗೆ ಸಲಹೆ ನೀಡಿದ್ದಾರೆ.  ಕಾಶ್ಮೀರ ಸೇರಿದಂತೆ ಎಲ್ಲ ವಿವಾದಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಪಾಕಿಸ್ತಾನ ಮತ್ತು ಭಾರತ ಹಾಗೂ ಏಷ್ಯಾ ಪ್ರಾಂತ್ಯದ ಹಿತಾಸಕ್ತಿ ದೃಷ್ಟಿಯಿಂದ ಉಭಯ ರಾಷ್ಟ್ರಗಳು ಚರ್ಚೆಗೆ ಮುಂದಾಗುವ ಅಗತ್ಯವನ್ನು ಮಹಾ ಪ್ರಧಾನ ಕಾರ್ಯದರ್ಶಿಯವರು ಪ್ರತಿಪಾದಿಸಿದ್ದಾರೆ ಎಂದು ಮೂನ್ ಅವರ ವಕ್ತಾರರು ಹೇಳಿದ್ದಾರೆ.

ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ನವಾಜ್ ಷರೀಫ್ ಆರೋಪಿಸಿದ ಬೆನ್ನಲ್ಲೇ ವಿಶ್ವಸಂಸ್ಥೆ ಮುಖ್ಯಸ್ಥರು ಈ ಹೇಳಿಕೆ ನೀಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin