ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುವ ಪ್ಲಾನ್ ಮಾಡಿಕೊಂಡಿದ್ದರೆ ಇದನ್ನೊಮ್ಮೆ ಗಮನಿಸಿ

ಈ ಸುದ್ದಿಯನ್ನು ಶೇರ್ ಮಾಡಿ

Kukke--02

ದಕ್ಷಿಣ ಕನ್ನಡ,ಜ.26-ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.31ರಂದು ಚಂದ್ರಗ್ರಹಣದ ನಿಮಿತ್ತ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ ಉಂಟಾಗಲಿದೆ. ಅಂದು ಬೆಳಗ್ಗೆ 6.30ರಿಂದ ಬೆಳಗ್ಗೆ 9 ಗಂಟೆವರೆಗೆ ದರ್ಶನಕ್ಕೆ ಅವಕಾಶವಿದ್ದು, ಮಧ್ಯಾಹ್ನದ ಮಹಾಪೂಜೆಯು ಬೆಳಗ್ಗೆ 8 ಗಂಟೆಗೆ ನೆರವೇರಲಿದೆ. ಬೆಳಗ್ಗೆ 9 ಗಂಟೆಯ ನಂತರ ದೇವಳದಲ್ಲಿ ಯಾವುದೇ ಸೇವೆಗಳು ನೆರವೇರುವುದಿಲ್ಲ ಎಂದು ದೇವಳದ ಆಡಳಿತ ಮಂಡಳಿ ತಿಳಿಸಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುವ ಭಕ್ತರು ಮಾಹಿತಿ ಗಮನಿಸಿ ಕ್ಷೇತ್ರಕ್ಕೆ ಭೇಟಿ ನೀಡಬೇಕೆಂದು ಮಂಡಳಿ ತಿಳಿಸಿದೆ.

Facebook Comments

Sri Raghav

Admin