ಕುಡಿಯುವ ನೀರಿಗಾಗಿ 24 ಗಂಟೆ ಕೆಲಸ ನಿರ್ವಹಿಸಲು ಪುಟ್ಟಣ್ಣಯ್ಯ ತಾಕೀತು

ಈ ಸುದ್ದಿಯನ್ನು ಶೇರ್ ಮಾಡಿ

mandya

ಪಾಂಡವಪುರ, ಫೆ.23-ಕುಡಿಯುವ ನೀರಿನ ವಿಷಯದಲ್ಲಿ ಅಧಿಕಾರಿಗಳು 24 ಗಂಟೆ ಕೆಲಸ ಮಾಡಬೇಕು ಎಂದು ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅಧ್ಯಕ್ಷತೆಯಲ್ಲಿ ಬೇಬಿ ಜಾತ್ರೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.ತಾಲೂಕಿನ ಯಾವ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಅಲ್ಲಿಗೆ ತಕ್ಷಣವೇ ಟ್ಯಾಂಕರ್‍ಗಳು ಹಾಗೂ ಖಾಸಗಿ ಬೋರ್‍ವೆಲ್‍ಗಳ ಮೂಲಕ ನೀರೊದಗಿಸಬೇಕು. ಕುಡಿಯುವ ನೀರಿನ ಸಮಸ್ಯೆ ಸಂಬಂಧ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.ತಾಲೂಕಿನ ವಿವಿಧೆಡೆ ಉದ್ಬವಿಸಿರುವ ಕುಡಿಯುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದರು.

ಹೊನಗಾನಹಳ್ಳಿ ಗ್ರಾಪಂ ಪಿಡಿಒ ರಾಜು ಅವರು, ನಮ್ಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡಿರುವ ಬಾಬ್ತು 2 ಲಕ್ಷ ರೂ.ಗಳವರೆಗೆ ಹಣ ಪಾವತಿಲಿಗರೆ ನೀರಿನ ಸಮಸ್ಯೆ ಎದುರಾಗದು ಎಂದು ಹೇಳಿದಾಗ ತಕ್ಷಣವೇ ಟ್ಯಾಂಕರ್ ಮಾಲೀಕರಿಗೆ, ಖಾಸಗಿ ಬೋರ್‍ವೆಲ್‍ಗಳಿಗೆ ಹಣ ಪಾವತಿಸಿ ಎಂದು ತಹಸೀಲ್ದಾರ್ ಅವರಿಗೆ ತಾಕೀತು ಮಾಡಿದರು.ಬೇಬಿ ಬೆಟ್ಟದ ಭಾರಿ ದನಗಳ ಜಾತ್ರೆಗೆ ಸಕಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕೃಷಿ, ಆರೋಗ್ಯ, ಪಶು, ಅರಣ್ಯ, ಪೊಲೀಸ್ ಸೇರಿದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ಜಾತ್ರೆಗೆ ಬರುವ ಜನ-ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಆದೇಶಿಸಿದರು.ತಹಸೀಲ್ದಾರ್ ಡಿ.ಹನುಮಂತರಾಯಪ್ಪ, ಪಿಎಸ್‍ಎಸ್‍ಕೆ ಅಧ್ಯಕ್ಷ ಹಾರೋಹಳ್ಳಿ ನಂಜುಂಡೇಗೌಡ, ತಾ.ಪಂ ಅಧ್ಯಕ್ಷೆ ರಾಧಮ್ಮ, ಉಪಾಧ್ಯಕ್ಷೆ ಎಚ್.ಲಕ್ಷ್ಮಮ್ಮ ರಂಗಸ್ವಾಮಿ, ಸದಸ್ಯೆ ಎಚ್.ಸಿ.ಶೋಭಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin