ಕುಡಿಯುವ ನೀರಿಗೆ ಆಗ್ರಹಿಸಿ ಖಾಲಿ ಕೊಡಗಳೊಂದಿಗೆ ಮಹಿಳೆಯರ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

gubbi

ಗುಬ್ಬಿ, ಏ.18-ಕುಡಿಯುವ ನೀರಿಗಾಗಿ ತೋಟದ ಬಾವಿಗಳಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೂಡಲೆ ಸಂಬಂಧಿಸಿದ ಅಧಿಕಾರಿಗಳು ನೀರು ಒದಗಿಸಿಕೊಡಬೇಕೆಂದು ಒತ್ತಾಯಿಸಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಹಿಂಡಸಗೆರೆ ಗ್ರಾಮದ ಮಹಿಳೆಯರು ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯ್ತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.ಗ್ರಾಮದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಮನೆಗಳಿದ್ದು ಈ ಹಿಂದೆ ಕುಡಿಯುವ ನೀರಿಗಾಗಿ ಕೊರೆಸಿದ್ದ ಎರಡು ಕೊಳವೆ ಬಾವಿಗಳು ಬತ್ತಿಹೋಗಿವೆ. ಒಂದು ವಾರದಿಂದ ಕುಡಿಯುವ ನೀರಿಲ್ಲದೆ ಜನ, ಜಾನುವಾರು ಪರಿತಪಿಸುವಂತಾಗಿದೆ. ಏ18 ರಿಂದ 22 ರವರೆಗೆ ಗ್ರಾಮದೇವತೆ ಜಾತ್ರೆ ಇರುವುದರಿಂದ ಸುತ್ತ ಮುತ್ತಲ ಗ್ರಾಮಗಳಿಂದ ನೂರಾರು ಮಂದಿ ಬರುವವರಿದ್ದಾರೆ. ಕೂಡಲೇ ಜನರಿಗೆ ತೊಂದರೆಯಾಗದಂತೆ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಮಹಿಳೆಯರು ಒತ್ತಾಯಿಸಿದರು.

ಗ್ರಾಮದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಮನಗಂಡು ರಸ್ತೆ ಕಾಮಗಾರಿ ನಡೆಸುತ್ತಿರುವ ಕೆಶಿಫ್ ನವರು ಪ್ರತಿ ದಿನ ಮೂರು ಟ್ಯಾಂಕ್ ನೀರನ್ನು ಕೊಡುತ್ತಿದ್ದಾರೆ. ಅವರೊಂದಿಗೆ ಗ್ರಾಮ ಪಂಚಾಯ್ತಿಯವರು ಕೂಡ ಹೆಚ್ಚು ನೀರನ್ನು ಜಾತ್ರೆ ಸಮಯದಲ್ಲಿ ಒದಗಿಸಬೇಕು ಎಂದು ಮಹಿಳೆಯರು ಮನವಿ ಮಾಡಿದರು.ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಾತನಾಡಿ, ಗ್ರಾಮಕ್ಕೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲು ಎಲ್ಲಾ ಸದಸ್ಯರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಗ್ರಾಮದ ಮುಖಂಡರಾದ ನಾರಾಯಣಶೆಟ್ಟಿ, ಲೋಹಿತ್, ವೆಂಕಟೇಶ್, ತಿಮ್ಮೇಗೌಡ, ತೇಜುಮೂರ್ತಿ, ರಮೇಶ್, ಗೋವಿಂದರಾಜು, ಶ್ರೀನಿವಾಸ್, ಕೃಷ್ಣಮೂರ್ತಿ, ನಿರಂಜನ್, ಮಮತಾ ಮುಂತಾದವರು ಭಾಗವಹಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin