ರಾಯಚೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ : ಎಚ್.ಕೆ.ಪಾಟೀಲ್

ಈ ಸುದ್ದಿಯನ್ನು ಶೇರ್ ಮಾಡಿ

PATIL

ರಾಯಚೂರು, ಮೇ 16- ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 336 ಶುದ್ಧ ಕುಡಿಯುವ ನೀರಿನ ಘಟಕಗಳು ಕೆಲಸ ನಿರ್ವಹಿಸುತ್ತಿವೆ. ಕೆಲವು ಗ್ರಾಮಗಳಲ್ಲಿ ಸಮಸ್ಯೆ ಇದೆ. ಇದನ್ನು ಸರಿಪಡಿಸಲು ವಾಟರ್ ಆ್ಯಂಬುಲೆನ್ಸ್ ನಿಯೋಜಿಸಲಾಗಿದೆ ಎಂದು ಹೇಳಿದರು.
ಜಲಮೂಲ ಇಲ್ಲದ ಕಡೆ ಬೋರ್‍ವೆಲ್‍ಗಳನ್ನು ಕೊರೆಸಲು ಸಾಧ್ಯವಾಗುವುದಿಲ್ಲ.

ಹಾಗಾಗಿ ಟ್ಯಾಂಕರ್‍ಗಳ ಮೂಲಕ ನೀರು ಪೂರೈಕೆ ಮಾಡಲಾಗುವುದು. ಒಟ್ಟಾರೆ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು. ರಾಯಚೂರು ಜಿಲ್ಲೆ ಕೊಳವೆ ಬಾವಿ ಹಗರಣ ಸಂಬಂಧ ವರದಿ ತಯಾರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಜತೆಗೆ ನಿವೃತ್ತ ನ್ಯಾಯಾಧೀಶ ಪತ್ತಾರ್ ನೇತೃತ್ವದ ಸಮಿತಿ ರಚಿಸಲಾಗಿದೆ. ಪರಿಶೀಲನಾ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್.ಕೆ.ಪಾಟೀಲ್ ಹೇಳಿದರು.
ಚುನಾವಣೆ: ಮುಂಬರುವ ವಿಧಾನಸಭಾ ಚುನಾವಣೆಯನ್ನು ಯಾರ ನಾಯಕತ್ವದಲ್ಲಿ ಎದುರಿಸಬೇಕೆಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ವರಿಷ್ಠರು ಹೇಳಿದಂತೆ ನಾವು ನಡೆಯಬೇಕಿದೆ ಎಂದು ವರದಿಗಾರರು ಕೇಳಿದ ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ನೀಡಿದರೂ ನಮ್ಮ ಅಭ್ಯಂತರವಿಲ್ಲ. ಹೈಕಮಾಂಡ್ ತಕ್ಕ ವ್ಯಕ್ತಿಯನ್ನೇ ಆರಿಸುತ್ತದೆ. ಆಯ್ಕೆ ಅವರಿಗೇ ಬಿಟ್ಟ ವಿಚಾರ ಎಂದು ಎಚ್.ಕೆ.ಪಾಟೀಲ್ ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin