ಕುದುರೆ ವ್ಯಾಪಾರಕ್ಕೆ ಬಲಿಯಾಗದಂತೆ ಜೆಡಿಎಸ್ ಶಾಸಕ ಸ್ಥಳಾಂತರ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy-JDS
ಬೆಂಗಳೂರು,ಮೇ16- ಸರ್ಕಾರ ರಚಿಸಲು ಮುಂದಾಗಿರುವ ಬಿಜೆಪಿ ಕುದುರೆ ವ್ಯಾಪಾರದಿಂದ ಇತರೆ ಪಕ್ಷಗಳ ಶಾಸಕರನ್ನು ಸೆಳೆಯಲು ನಡೆಸುತ್ತಿರುವ ತಂತ್ರದಿಂದಾಗಿ ಜೆಡಿಎಸ್ ಶಾಸಕರನ್ನು ಖಾಸಗಿ ಹೋಟೆಲ್‍ಗೆ ವರ್ಗಾಯಿಸಿ ತಂತ್ರಕ್ಕೆ ಬಲಿಯಾಗಿಸದಿರಲು ತಾತ್ಕಾಲಿಕ ವ್ಯವಸ್ಥೆ ಕೈಗೊಳ್ಳಲಾಗಿದೆ.
ಜಯನಗರದ ಖಾಸಗಿ ಹೋಟೆಲ್‍ನಲ್ಲಿ ಶಾಸಕರಿಗೆ ವ್ಯವಸ್ಥೆ ಕಲ್ಪಿಸಲಾಗಿದ್ದು,ಹೋಟೆಲ್‍ನ್ನು ಬಿಟ್ಟು ತೆರಳದಂತೆ ಸ್ಪಷ್ಟ ಸೂಚನೆ ರವಾನಿಸಲಾಗಿದೆ.

ಪಕ್ಷದ ವರಿಷ್ಠರಿಂದ ಮುಂದಿನ ಸೂಚನೆ ಬರುವವರೆಗೂ ಶಾಸಕರು ಹೋಟೆಲ್ ಬಿಟ್ಟು ತೆರಳದಂತೆ ನಿರ್ದೇಶನ ನೀಡಲಾಗಿದೆ. ರಾಜ್ಯಪಾಲರ ಸ್ಪಷ್ಟ ನಿರ್ಧಾರ ಪ್ರಕಟವಾಗುವವರೆಗೂ ಎಲ್ಲ ರೀತಿಯಲ್ಲೂ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನ ನಡೆಸಲಾಗುತ್ತಿದೆ. ಸರ್ಕಾರ ರಚನೆಗೆ ಮುಂದಾಗಿರುವ ಬಿಜೆಪಿ ಜೆಡಿಎಸ್ ಶಾಸಕರನ್ನು ಸಂಪರ್ಕಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ವಹಿಸಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin