ಕುಮಾರಸ್ವಾಮಿಗೆ 2 ಲಕ್ಷ ರೂ. ಪಾರ್ಟಿ ಫಂಡ್ ನೀಡಿದ ರೈತ ಕೃಷ್ಣಪ್ಪ..!

ಈ ಸುದ್ದಿಯನ್ನು ಶೇರ್ ಮಾಡಿ

Former-Krishnappa-JDS
ರಾಮನಗರ, ಏ.25-ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಹಾರೈಸಿ ಮಾಗಡಿ ವಿಧಾನಸಭಾ ಕ್ಷೇತ್ರದ ಕೂಟಗಲ್ಲು ಗ್ರಾಮದ ರೈತ ಕೃಷ್ಣಪ್ಪ ಎರಡು ಲಕ್ಷ ರೂ. ಪಕ್ಷದ ನಿಧಿಗೆ ದೇಣಿಗೆ ನೀಡಿದ್ದಾರೆ. ಕುಮಾರಸ್ವಾಮಿ ಅವರು ಹಣ ಬೇಡವೆಂದರೂ ಹಠವಿಡಿದು ರೈತ ಹಣ ನೀಡಿದ್ದಾರೆ. ಏಕಾಂಗಿಯಾಗಿ ರಾಜ್ಯಾದ್ಯಂತ ರೈತಪರ ಧ್ವನಿಯಾಗಿರುವ ಕುಮಾರಸ್ವಾಮಿ ಅವರಿಗೆ ನನ್ನ ಕೈಲಾದ ಸಹಾಯ ಮಾಡುತ್ತಿದ್ದೇನೆ ಎಂದು ರೈತ ಕೃಷ್ಣಪ್ಪ ಹೇಳಿದ್ದಾರೆ.

ಕುಮಾರಸ್ವಾಮಿ ಬಳಿ ಹಣವಿಲ್ಲ. ಕಾಂಗ್ರೆಸ್ ಬಿಜೆಪಿಯವರು ಸಾಕಷ್ಟು ಹಣ ಖರ್ಚು ಮಾಡುತ್ತಿದ್ದಾರೆ. ನಮ್ಮೂರಲ್ಲೇ ಲಕ್ಷ ಲಕ್ಷ ಹಣ ಖರ್ಚು ಮಾಡಲಾಗುತ್ತಿದೆ. ಅದನ್ನು ನೋಡಿದ ನಾನು ಕಷ್ಟಪಟ್ಟು ದುಡಿದ 2 ಲಕ್ಷ ರೂ. ಹಣವನ್ನು ಕುಮಾರಸ್ವಾಮಿ ಅವರಿಗೆ ನೀಡುವ ಮೂಲಕ ಆತ್ಮತೃಪ್ತಿ ಪಟ್ಟಿದ್ದೇನೆ ಎಂದು ಹೇಳಿದ್ದಾರೆ. ನಾನ್ಯಾರೆಂಬುದು ಕುಮಾರಸ್ವಾಮಿ ಅವರಿಗೆ ಗೊತ್ತೋ ಅಥವಾ ಗೊತ್ತಿಲ್ಲವೋ. ಆದರೆ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ರೈತರನ್ನು ಕಾಪಾಡುತ್ತಾರೆ ಎಂಬ ನಂಬಿಕೆಯಿಂದ ಹಣ ನೀಡಿದ್ದೇನೆ. ಇದರಿಂದ ಯಾವುದೇ ಫಲಾಪೇಕ್ಷೆ ನಿರೀಕ್ಷಿಸುವುದಿಲ್ಲ. ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಬೇಕೆಂದೇ ನನ್ನ ಆಸೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಬಡವರ, ರೈತರ ನಾಯಕರಾದ ಕುಮಾರಸ್ವಾಮಿ ಅವರ ಕಷ್ಟ ನೋಡಿ ನಾಡಿನ ಪ್ರತಿಯೊಬ್ಬ ರೈತ ಕೂಡ ಸ್ಪಂದಿಸುತ್ತಿದ್ದಾರೆ. ಕೂಟಗಲ್ಲು ಕೃಷ್ಣಪ್ಪ ಅವರು ತಮ್ಮ ಕಷ್ಟದ ನಡುವೆಯೂ ಸಹಾಯ ಮಾಡಿದ್ದಾರೆ. ಅವರಿಗೆ ಭಗವಂತ ಒಳ್ಳೆಯದನ್ನು ಮಾಡಲಿ. ರೈತರ ಆಶಯದಂತೆ ಜೆಡಿಎಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಹೇಳಿದ್ದಾರೆ.

Facebook Comments

Sri Raghav

Admin