ಕುಮಾರಸ್ವಾಮಿ ಅಧಿಕಾರಕ್ಕೆ ಬರಬೇಕೆಂಬುದು ಜನರ ಆಶಯ : ಎಚ್.ಡಿ.ದೇವೇಗೌಡರು

ಈ ಸುದ್ದಿಯನ್ನು ಶೇರ್ ಮಾಡಿ

hdk

ಬೆಂಗಳೂರು, ಏ.20-ರಾಜ್ಯದಲ್ಲಿ ಕುಮಾರಸ್ವಾಮಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂಬುದು ಜನರ ಆಶಯವಾಗಿದೆ. ಈಗಾಗಲೇ ಹಲವರ ಆಡಳಿತ ಕಂಡಿರುವ ರಾಜ್ಯದ ಜನತೆ ಕುಮಾರಸ್ವಾಮಿ ಆಡಳಿತವನ್ನು ಅಪೇಕ್ಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉಪ್ಪಾರರು ಒಗ್ಗೂಡಬೇಕಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದಿಲ್ಲಿ ತಿಳಿಸಿದರು.ನಗರದ ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ನಡೆದ ಉಪ್ಪಾರರ ಸಭೆಯಲ್ಲಿ ಮಾತನಾಡಿದ ಅವರು, 30 ಕ್ಷೇತ್ರಗಳಲ್ಲಿ ನಿರ್ಣಾಯಕರಾಗಿರುವ ಉಪ್ಪಾರರು ಒಗ್ಗೂಡಬೇಕಿದೆ. ನಾವು ನಿಮ್ಮನ್ನು ಅವಲಂಬಿಸಿದ್ದೇವೆ ಎಂದರು.ಈಗಾಗಲೇ ರಾಜ್ಯದಲ್ಲಿ ಜನ ಯಡಿಯೂರಪ್ಪ, ಸದಾನಂದಗೌಡ, ಜಗದೀಶ್‍ಶೆಟ್ಟರ್ ಸೇರಿದಂತೆ ಹಲವರ ಆಡಳಿತ ಕಂಡಿದ್ದಾರೆ. ಆಗಾಗಿ ಮತ್ತೊಮ್ಮೆ ಕುಮಾರಸ್ವಾಮಿ ಆಡಳಿತವನ್ನು ಅಪೇಕ್ಷಿಸುತ್ತಿದ್ದಾರೆ ಎಂದು ತಿಳಿಸಿದರು.ಉಪ್ಪಾರ, ನಾಯಕ ಹಾಗೂ ಮತ್ತಿತರ ಜನಾಂಗವನ್ನು ಎಸ್ಟಿಗೆ ಸೇರಿಸಬೇಕೆಂದು ಪ್ರಯತ್ನ ಪಟ್ಟಿದ್ದೆ. ಪ್ರಧಾನಿ ಚಂದ್ರಶೇಖರ್ ಅವರ ಆಡಳಿತಾವಧಿಯ ಕೊನೆ ಹಂತದಲ್ಲಿ ತಮ್ಮನ್ನು ಮಂತ್ರಿ ಮಾಡುವುದಾಗಿ ಹೇಳಿದ್ದರು. ಆಗ ನಮಗೆ ಮಂತ್ರಿಗಿರಿ ಬೇಡ ಉಪ್ಪಾರ ಸೇರಿದಂತೆ ಕೆಲವೊಂದು ಜನಾಂಗವನ್ನು ಎಸ್ಟಿಗೆ ಸೇರಿಸಿ ಎಂದು ಮನವಿ ಮಾಡಿದ್ದೆ ಎಂದರು.

ಎಚ್.ಸಿ.ನೀರಾವರಿ ಅವರು ಮೂರು ವರ್ಷಗಳಿಂದ ತಟಸ್ಥವಾಗಿದ್ದರು. ಅವರಿಗೆ ಬೇರೆ ಪಕ್ಷದಿಂದ ಆಹ್ವಾನ ಬಂದಿದ್ದರೂ ಎಲ್ಲಿಗೂ ಹೋಗಲಿಲ್ಲ. ನಮ್ಮ ಪಕ್ಷದಲ್ಲಿ ಅಧಿಕಾರ ಅನುಭವಿಸಿದ್ದವರು ಎಲ್ಲೆಲ್ಲಿಗೆ ಹೋಗಿದ್ದಾರೆ ಎಂಬುದು ಗೊತು. ಹಾಗೆಂದು ನಾವು ಕೈ ಕಟ್ಟಿ ಕೂರುವುದಿಲ್ಲ ಎಂದು ಮಾರ್ಮಿಕವಾಗಿ ನುಡಿದರು.ಯಾವುದೇ ಒತ್ತಡಗಳಿಗೂ ಮಣಿಯಲ್ಲ. ಕುಮಾರಸ್ವಾಮಿ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುತ್ತಾರೆ ಎಂದರು. ಎಚ್.ಸಿ.ನೀರಾವರಿ ಮಾತನಾಡಿ, ಮೂರು ವರ್ಷಗಳಿಂದ ಸುಮ್ಮನಿದ್ದೆ. ಫಲಾಪೇಕ್ಷೆ ಇಲ್ಲದೆ ಪಕ್ಷಕ್ಕಾಗಿ ದುಡಿದಿದ್ದೇನೆ. ನಿಷ್ಠಾವಂತನಾಗಿ ಕಾರ್ಯ ನಿರ್ವಹಿಸಿದ್ದೇನೆ. ದೇವೇಗೌಡರು ಸಹ ಉಪ್ಪಾರ ಜನಾಂಗವನ್ನು ಎಸ್ಟಿಗೆ ಸೇರಿಸಲು ಸಾಕಷ್ಟು ಶ್ರಮಿಸಿದ್ದರು ಎಂದರು.ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಉಪ್ಪಾರ ಸಮಾಜದ ರಾಜ್ಯಾಧ್ಯಕ್ಷ ಈಶ್ವರಯ್ಯ ಮತ್ತಿತರರು ಭಾಗವಹಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin