ಕುಮಾರಸ್ವಾಮಿ ಎದುರು ಗಳಗಳನೆ ಅತ್ತ ಮಾಜಿ ಶಾಸಕ ಕೋನರೆಡ್ಡಿ..!

ಈ ಸುದ್ದಿಯನ್ನು ಶೇರ್ ಮಾಡಿ

Konareddy--JDS
ಬೆಂಗಳೂರು, ಮೇ 16-ವಿಧಾನಸಭೆ ಚುನಾವಣೆಯಲ್ಲಿ ತೀವ್ರ ಮನನೊಂದಿರುವ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಕಣ್ಣೀರಿಟ್ಟಿದ್ದಾರೆ. ಖಾಸಗಿ ಹೊಟೇಲ್‍ನಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಕೋನರೆಡ್ಡಿ ಚುನಾವಣೆಯಲ್ಲಿ ತಾವು ಸೋತಿದ್ದಕ್ಕೆ ತುಂಬಾ ಬೇಸರ ಪಟ್ಟುಕೊಂಡಿದ್ದಾರೆ. ಮಹದಾಯಿ ವಿಚಾರದಲ್ಲಿ ಸಾಕಷ್ಟು ಹೋರಾಟ ಮಾಡಿದ್ದರೂ ಜನರು ಚುನಾವಣೆಯಲ್ಲಿ ಕೈ ಹಿಡಿಯಲಿಲ್ಲ ಎಂದು ಅಸಮಾಧಾನಗೊಂಡಿದ್ದರು.  ನವಲಗುಂದ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಿದ್ದರು. ತೀವ್ರ ದುಃಖಿತರಾದ ಕೋನರೆಡ್ಡಿ ಅವರನ್ನು ಕುಮಾರಸ್ವಾಮಿ ಅವರು ಸಮಾಧಾನಪಡಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Facebook Comments

Sri Raghav

Admin