ಕುಮಾರಸ್ವಾಮಿ ಪಟ್ಟಾಭಿಷೇಕದ ಹಿನ್ನೆಲೆಯಲ್ಲಿ ಜೆಡಿಎಸ್ ಕೇಂದ್ರ ಕಚೇರಿಗೆ ಹೂಗಳ ಅಲಂಕಾರ

ಈ ಸುದ್ದಿಯನ್ನು ಶೇರ್ ಮಾಡಿ

JP-Bhavan--01

ಬೆಂಗಳೂರು, ಮೇ 23-ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಕೇಂದ್ರ ಕಚೇರಿ ಜೆಪಿಭವನವನ್ನು ವಿಶೇಷವಾಗಿ ಹೂಗಳಿಂದ ಅಲಂಕರಿಸಲಾಗಿದೆ. ಕಚೇರಿ ಮುಂದೆ ಜೆಡಿಎಸ್ ಅಭಿಮಾನಿಗಳು, ಕಾರ್ಯಕರ್ತರು ಸಂಭ್ರಮಿಸುತ್ತಿದ್ದು ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ನೂತನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಶುಭ ಕೋರುವ ಬೃಹತ್ ಹೂವಿನ ಕಮಾನು ವಿಶೇಷವಾಗಿ ಎದ್ದು ಕಾಣುತ್ತಿದೆ. ಆನಂದರಾವ್ ವೃತ್ತದಲ್ಲಿ ಈ ಮೊದಲಿದ್ದ ಕಚೇರಿಯನ್ನು ಜೆಡಿಎಸ್ ಕಾಂಗ್ರೆಸ್‍ಗೆ ಬಿಟ್ಟುಕೊಟ್ಟ ನಂತರ ಜೆಪಿಭವನವನ್ನು ನೂತನವಾಗಿ ನಿರ್ಮಿಸಲಾಗಿತ್ತು.

ಕಳೆದ ಒಂದು ವರ್ಷದಿಂದ ಈ ಕೇಂದ್ರ ಕಚೇರಿಯಲ್ಲೇ ಎಲ್ಲ ಕಾರ್ಯಕ್ರಮಗಳು ನಡೆಯುತ್ತಿವೆ. ಇಂದು ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುತ್ತಿರುವುದರಿಂದ ಭವನವನ್ನು ವಿಶೇಷ ಹೂವಗಳಿಂದ ಅಲಂಕರಿಸಲಾಗಿದೆ.

Facebook Comments

Sri Raghav

Admin