ಕುರಿ ಕಾಯುತ್ತಿದ್ದ ರೈತನ ಮೇಲೆ ಚಿರತೆ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

ಕುಣಿಗಲ್,ಅ.18-ಕುರಿ ಕಾಯುತ್ತಿದ್ದ ರೈತ ಮೇಲೆ ಚಿರತೆಯೊಂದು ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವೆಂಕಟೇಶ್(50) ಗಾಯಗೊಂಡ ರೈತ. ಈತ ನಿನ್ನೆ ಸಂಜೆ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿ ಆರ್.ಬ್ಯಾಡರಹಳ್ಳಿ ಗ್ರಾಮದ ಕೆರೆಯಂಗಳದಲ್ಲಿ ಕುರಿ ಮೇಯಿಸುತ್ತಿದ್ದ ವೇಳೆ ಪೊದೆಯೊಳಗೆ ಅಡಗಿ ಕುಳಿತಿದ್ದ ಚಿರತೆಯೊಂದು ಕುರಿಯನ್ನು ತಿನ್ನಲೆಂದು ಕುರಿಯ ಮೇಲೆ ದಾಳಿ ನಡೆಸಿದೆ. ಇದನ್ನು ಕಂಡ ವೆಂಕಟೇಶ್ ಬಿಡಿಸಲೆಂದು ಹೋದಾಗ ಆತನ ಮೇಲೂ ದಾಳಿ ನಡೆಸಿ ಕೈಕಾಲು, ತಲೆಗೆ ತೀವ್ರವಾಗಿ ಗಾಯಗೊಳಿಸಿದೆ. ರಕ್ಷಣೆಗಾಗಿ ಕೂಗಿಕೊಂಡಾಗ ಅಕ್ಕಪಕ್ಕದಲ್ಲಿದ್ದ ರೈತರು ಓಡಿಬಂದು ಚಿರತೆಯನ್ನು ಓಡಿಸಿ ವೆಂಕಟೇಶ್‍ನನ್ನು ರಕ್ಷಿಸಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin